Maruti Suzuki: ಐಟಿಬಿಪಿ ಸೇರ್ಪಡೆಗೊಂಡ ಜನಪ್ರಿಯ ಮಾರುತಿ ಕಾರು.. ಯಾವುದು, ವಿಶೇಷತೆಗಳೇನು?

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki India Limited), ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿ​ಸ್‌ಗೆ (ಐಟಿಬಿಪಿ) ಅಧಿಕೃತವಾಗಿ 60 ಜಿಮ್ನಿ (Jimny) ಎಸ್‌ಯುವಿಗಳನ್ನು ಹಸ್ತಾಂತರಿಸಿದೆ. ಇದರೊಂದಿಗೆ ಅರೆಸೇನಾ ಪಡೆಯೊಂದಕ್ಕೆ ಜಿಮ್ನಿ ಕಾರು ಮೊದಲ ಬಾರಿಗೆ ಸೇರ್ಪಡೆಗೊಂಡಿದೆ. ಈ ಎಸ್‌ಯುವಿಯನ್ನು ಲೇಹ್-ಲಡಾಖ್ & ಅರುಣಾಚಲ ಪ್ರದೇಶದ ಎತ್ತರದ ಗಡಿ ಪ್ರದೇಶದಲ್ಲಿ ನಿಯೋಜಿಸಲಾಗುತ್ತದೆ. ಗಸ್ತು ಸೇರಿದಂತೆ ಇತರೆ ಕಾರ್ಯಗಳಿಗೆ ಐಟಿಬಿಪಿ ಬಳಕೆ ಮಾಡಲಿದೆ.

ನವದೆಹಲಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿ​ಸ್‌ ಪ್ರಧಾನ ಕಚೇರಿಯಲ್ಲಿ ಈ ಹಸ್ತಾಂತರ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಐಟಿಬಿಪಿ ಮಹಾನಿರ್ದೇಶಕ ಅಬ್ದುಲ್ ಘನಿ ಮಿರ್ ಹಾಗೂ ಮಾರುತಿ ಸುಜುಕಿಯ ಮಾರ್ಕೆಟಿಂಗ್ & ಸೇಲ್ಸ್ ವಿಭಾಗದ ಸೀನಿಯರ್ ಎಕ್ಸಿಕ್ಯೂಟಿವ್ ಆಫೀಸಿರ್ ಪಾರ್ಥೋ ಬ್ಯಾನರ್ಜಿ ಅವರು ಭಾಗವಹಿಸಿದ್ದರು.

Maruti Suzuki Hands Over 60 Jimny SUVs to ITBP Details

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿ​ಸ್‌ (ಐಟಿಬಿಪಿ) ಪಡೆಗಳು, ಹಿಮ ಪರ್ವತಗಳು ಹಾಗೂ ಕಠಿಣ ಭೂಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತವೆ. ಇಂತಹ ಸಂದರ್ಭದಲ್ಲಿ ಶಕ್ತಿಯುತ ವಾಹನಗಳು ಅಗತ್ಯವಾಗಿದ್ದು, ಮಾರುತಿ ಸುಜುಕಿ ಜಿಮ್ನಿ ಎಸ್‌ಯುವಿಗಳು ಹೆಚ್ಚು ಸೂಕ್ತವಾಗಲಿವೆ. ಈ ಕಾರು ಫೋರ್-ವೀಲ್ ಡ್ರೈವ್ ಹಾಗೂ ಉತ್ತಮ ಗ್ರೌಂಡ್ ಕ್ಲಿಯರೆನ್ಸ್ ಆಯ್ಕೆಯನ್ನು ಹೊಂದಿರುವುದರಿಂದ ಎಲ್ಲ ವಿವಿಧ ಭೂ ಪ್ರದೇಶಗಳಲ್ಲಿಯೂ ಸುಲಭವಾಗಿ ಚಲಿಸಬಲ್ಲದು.

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ವಿಶೇಷತೆಗಳೇನು: ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಈ 5-ಡೋರ್ ಎಸ್‌ಯುವಿ, ಕನಿಷ್ಠ ರೂ.12.76 ಲಕ್ಷ ಹಾಗೂ ಗರಿಷ್ಠ ರೂ.14.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಜಿಟಾ ಮತ್ತು ಆಲ್ಪಾ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಗ್ರಾನೈಟ್ ಗ್ರೇ, ನೆಕ್ಸಾ ಬ್ಲೂ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು, 1.5-ಲೀ. ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 105 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 134 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16 ರಿಂದ 17 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇದು 4 ಆಸನ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ.

ನೂತನ ಜಿಮ್ನಿ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಸ್ಪೀಕರ್‌ಗಳು, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕ್ರೂಸ್ ಕಂಟ್ರೋಲ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ- ಲಾಕ್ ಬ್ರೇಕಿಂಗ್ ಸಿಸ್ಟಮ್) & ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಪಡೆದಿದೆ.

ವಿದೇಶಕ್ಕೂ ರಫ್ತು: ಭಾರತದಲ್ಲಿ ಈ ಮಾರುತಿ ಸುಜುಕಿ ಜಿಮ್ನಿಗೆ ಕೊಂಚಮಟ್ಟಿಗೆ ಬೇಡಿಕೆ ಕುಸಿತವಾಗಿದೆ. ಆದರೂ ವಿದೇಶಗಳಲ್ಲಿ ಫುಲ್ ಡಿಮ್ಯಾಂಡ್ ಹೊಂದಿದೆ. ಈಚೆಗೆ ಭಾರತದಿಂದ ರಫ್ತು ಮಾಡಲಾಗುತ್ತಿರುವ ಇದೇ ಜಿಮ್ನಿ ಕೇವಲ 4 ದಿನಗಳಲ್ಲಿ 50,000ಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಅಲ್ಲಿ 'ಸುಜುಕಿ ಜಿಮ್ನಿ ನೊಮೇಡ್' ಹೆಸರಿನಲ್ಲಿ ಮಾರಾಟಗೊಳಿಸಲಾಗುತ್ತಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, February 10, 2025, 12:26 [IST]
English summary
Maruti suzuki hands over 60 jimny suvs to itbp details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+