21 ಕಿ.ಮೀ ಮೈಲೇಜ್.. 5-ಸೀಟರ್, ಬಡವರ ಐರಾವತ.. ಆದರೂ ಖರೀದಿಸಿಲ್ಲ, ಸದ್ಯ ರೂ.5.35 ಲಕ್ಷಕ್ಕೆ ಲಭ್ಯ!
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. 'ನೆಕ್ಸಾ' ಡೀಲರ್‌ಶಿಪ್ ಮೂಲಕ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದು ನೋಡಲು ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹಲವು ಅತ್ಯಾಕರ್ಷಕವಾದ ವೈಶಿಷ್ಟ್ಯಗಳನ್ನು ಹೊಂದಿದೆ. ಆದರೂ ಈ ಆಗಸ್ಟ್ ತಿಂಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿಲ್ಲ. ಒಟ್ಟು 2,097 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2,464 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -15% ಇಳಿಕೆಯಾಗಿದೆ.
ಈ ಮಾರುತಿ ಇಗ್ನಿಸ್ ಮಾರಾಟ ಸಂಖ್ಯೆ ಆಗಸ್ಟ್‌ನಲ್ಲಿ ಕುಸಿತವಾಗಲು ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಆಗಲೇ ಜಿಎಸ್‌ಟಿ ತೆರಿಗೆ ದರಗಳು ಇಳಿಮುಖವಾಗಲಿದೆ ಎಂಬ ಮಾಹಿತಿಯು ಗ್ರಾಹಕರಿಗೆ ಲಭ್ಯವಾಗಿತ್ತು. ಬಹುತೇಕರು ಹೆಚ್ಚು-ಕಮ್ಮಿ ಇದೇ ಕಾರಿನ ಬೆಲೆಗೆ ಇತರೆ ಕಂಪನಿಗಳ ಎಸ್‌ಯುವಿಗಳನ್ನು ಕೊಂಡುಕೊಳ್ಳಲು ಒಲವು ತೋರಿಸುತ್ತಿರುವುದರಿಂದ 'ಇಗ್ನಿಸ್' ಮಾರಾಟ ಸಂಖ್ಯೆ ಕಡಿಮೆಯಾಗಿದೆ ಎನ್ನಲಾಗಿದೆ.

ಮಾರುತಿ ಸುಜುಕಿ ಇಗ್ನಿಸ್ ವಿಶೇಷತೆಗಳೇನು:
ಸೆ.22ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಈ ಕಾರಿನ ಬೆಲೆಯೂ ರೂ.71,300 ವರೆಗೆ ಬೆಲೆ ಇಳಿಕೆಯಾಗಿದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುವಂತಿದೆ.
ಇದು ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 15 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಲ್ಯೂಸೆಂಟ್ ಆರೆಂಜ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ & ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಇಗ್ನಿಸ್ ಸ್ವಲ್ಪ ಮಟ್ಟಿಗೆ ವಿಶಾಲ ಗಾತ್ರದಲ್ಲಿದೆ. 3,700 ಎಂಎಂ ಉದ್ದ, 1,690 ಎಂಎಂ ಅಗಲ ಹಾಗೂ 1595 ಎತ್ತರವಿದೆ. ಜೊತೆಗಿದು 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 865 ಕೆಜಿ ತೂಕವಿದೆ.
ಈ ಕಾರು 5-ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಸಾಗಿಸಲು ಸಾಧ್ಯವಾಗುವಂತೆ 260 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 21 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 32 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.
ಹೊಸ ಇಗ್ನಿಸ್ 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ ಸ್ಟಾಪ್ ಬಟನ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಹ್ಯಾಚ್‌ಬ್ಯಾಕ್ ಸುರಕ್ಷತೆಗೆ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್, ಸೆಂಟ್ರಲ್ ಲಾಕಿಂಗ್ ಹಾಗೂ ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್‌ನ್ನು ಪಡೆದಿದೆ. ಇದಕ್ಕೆ ಟಾಟಾ ಪಂಚ್, ಹ್ಯುಂಡೈ ಎಕ್ಸ್‌ಟರ್ ಹಾಗೂ ಮಾರುತಿ ಸುಜುಕಿ ಫ್ರಾಂಕ್ಸ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








