ಬಡವರ ಅಂಬಾರಿ.. 5.85 ಲಕ್ಷ, ಈ ಚಿನ್ನದಂತಹ ಕಾರನ್ನು ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ.. ಕಾರಣವೇನು?
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ನೆಕ್ಸಾ ಡೀಲರ್‌ಶಿಪ್ ಮೂಲಕ ಯಶಸ್ವಿಯಾಗಿ ಮಾರಾಟಗೊಳಿಸಲಾಗುತ್ತಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅದರ ಹೊರತಾಗಿಯೂ ಈ ಜುಲೈ ತಿಂಗಳು ಕೂಡ ಇದೇ 'ಇಗ್ನಿಸ್' ಕಾರಿನ ಮಾರಾಟ ಸಂಖ್ಯೆಯು ಕುಸಿತವಾಗಿದೆ. ಒಟ್ಟು 1977 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 10.79% ಇಳಿಕೆಯಾಗಿದೆ. 2024ರ ಇದೇ ಅವಧಿಯಲ್ಲಿ 2,216 ಯುನಿಟ್‌ಗಳನ್ನು ಮಾರಲಾಗಿತ್ತು.
ಈ ಫೆಬ್ರವರಿಯಿಂದ ಜೂನ್‌ವರೆಗಿನ 5 ತಿಂಗಳ ಅವಧಿಯಲ್ಲಿಯೂ 'ಮಾರುತಿ ಸುಜುಕಿ ಇಗ್ನಿಸ್' ಕಾರಿನ ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 9,569 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿಗೊಂಡ ಪ್ರತಿ ವರ್ಷ ಸರಿ ಸುಮಾರು 1,913 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

ಮಾರುತಿ ಸುಜುಕಿ ಇಗ್ನಿಸ್ ಮಾರಾಟ ಸಂಖ್ಯೆ ಕುಸಿತವಾಗುತ್ತಿರುವುದಕ್ಕೆ ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಇದು ಸಣ್ಣ ಗಾತ್ರದ ಕಾರಾಗಿದೆ. ಬಹುತೇಕ ಗ್ರಾಹಕರು ದೊಡ್ಡದಾಗಿರುವ ಸೆಡಾನ್ ಹಾಗೂ ಎಸ್‌ಯುವಿಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ, ಈ ಕಾರಿನ ಮಾರಾಟ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಮಾರುತಿ ಸುಜುಕಿ ಇಗ್ನಿಸ್ ವಿಶೇಷತೆಗಳೇನು:
ಇದು ಪ್ರೀಮಿಯಂ ಕಾರಾಗಿದ್ದರೂ ಅತಿ ಕಡಿಮೆ ಬೆಲೆಗೆ ದೊರೆಯಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.5.85 ಲಕ್ಷದಿಂದ ರೂ.8.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಸಿಗ್ಮಾ, ಡೆಲ್ಟಾ, ಜಿಟಾ & ಆಲ್ಪಾ ಎಂಬ ಆತ್ಯಾರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಕಾರು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾಗಿರುವ ಸರಳವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 15-ಇಂಚಿರುವ ಅಲಾಯ್ ವೀಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲೂ, ಲ್ಯೂಸೆಂಟ್ ಆರೆಂಜ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ಇಗ್ನಿಸ್ ಕೊಂಚ ಮಟ್ಟಿಗೆ ವಿಶಾಲ ಗಾತ್ರದಲ್ಲಿದೆ. 3,700 ಎಂಎಂ ಉದ್ದ, 1,690 ಎಂಎಂ ಅಗಲ ಹಾಗೂ 1595 ಎತ್ತರ ಕೂಡ ಇದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 865 ಕೆಜಿ ತೂಕವಿದೆ.

ಇದು ಶಕ್ತಿಯುತ ಏಕೈಕ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 6,000 ಆರ್‌ಪಿಎಂನಲ್ಲಿ 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4200 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು . 20 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 32 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.
ಈ ಕಾರು 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5-ಆಸನಗಳನ್ನು ಪಡೆದಿದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್, ಕೀಲೆಸ್ ಎಂಟ್ರಿ ಮತ್ತು ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಪವರ್ ವಿಂಡೋಗಳನ್ನು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಇಗ್ನಿಸ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಯಲಿದೆ. ಅದಕ್ಕಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೆಂಟ್ರಲ್ ಲಾಕಿಂಗ್ ಸಿಸ್ಟಮ್, ಸ್ಪೀಡ್ ಸೆನ್ಸಿಂಗ್ ಡೋರ್ ಲಾಕ್ ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಒಳಗೊಂಡಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications