ಬ್ರೋ.. ಬಡವರ ಲಕ್ಷುರಿ ಕಾರಿದು, 5.85 ಲಕ್ಷ ರೂಪಾಯಿ.. ಆದ್ರೂ ಸೇಲ್ಸ್‌ನಲ್ಲಿ ಮುಂದಿಲ್ಲ, ಯಾಕೆ?

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಗಿದೆ. ಇದು ಹೆಚ್ಚು ಆಕರ್ಷಕವಾಗಿದೆ. ಅದರ ಹೊರತಾಗಿಯೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಕಳೆದ ಜೂನ್ ತಿಂಗಳಲ್ಲೂ ಅದು ಮುಂದುವರಿದಿದೆ. ಒಟ್ಟು 1,484 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -41.48% ಕುಸಿತವಾಗಿದೆ. 2024ರ ಜೂನ್‌ನಲ್ಲಿ 2,536 ಯುನಿಟ್‌ಗಳನ್ನು ಮಾರಲಾಗಿತ್ತು.

ಇದೇ ವರ್ಷದ ಮೊದಲ 5 ತಿಂಗಳಲ್ಲೂ ಮಾರುತಿ ಸುಜುಕಿ ಇಗ್ನಿಸ್ ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 11,865 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು ಸರಾಸರಿ 2,373 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Maruti Suzuki Ignis June 2025 Sales Report

ಮಾರುತಿ ಸುಜುಕಿ ಇಗ್ನಿಸ್ ಮಾರಾಟ ಪ್ರಮಾಣ ಕುಸಿತವಾಗಲು ಸಾಕಷ್ಟು ಕಾರಣಗಳಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಬಹುಮುಖ್ಯವಾಗಿ ಇದೇ ಇಗ್ನಿಸ್ ಬೆಲೆಗೆ ಇತರೆ ಕಂಪನಿಗಳ ಎಸ್‌ಯುವಿಗಳನ್ನು ಖರೀದಿ ಮಾಡಬಹುದು. ಬಹುತೇಕ ಗ್ರಾಹಕರು ಅವುಗಳತ್ತ ಮುಖ ಮಾಡಿದ್ದಾರೆ. ಜೊತೆಗೆ ಈ ಕಾರಿನ ಗಾತ್ರವು ಚಿಕ್ಕದಾಗಿದೆ ಎಂಬುದು ಹಲವರ ಅಭಿಪ್ರಾಯವಾಗಿದೆ.

ಮಾರುತಿ ಸುಜುಕಿ ಇಗ್ನಿಸ್ ವಿಶೇಷತೆಗಳೇನು:

ಈ ಹ್ಯಾಚ್‌ಬ್ಯಾಕ್‌ನ್ನು ಸಾಮಾನ್ಯ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ಬಜೆಟ್ ಬೆಲೆಯಲ್ಲಿಯೂ ಲಭ್ಯವಿದ್ದು, ಕನಿಷ್ಠ ರೂ.5.85 ಲಕ್ಷ ಹಾಗೂ ಗರಿಷ್ಠ ರೂ.8.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಮತ್ತು ಆಲ್ಪಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Ignis June 2025 Sales Report

ನೂತನ ಇಗ್ನಿಸ್ ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಲ್ಯೂಸೆಂಟ್ ಆರೆಂಜ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಇದರಲ್ಲಿ 5-ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 260 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 3,700 ಎಂಎಂ ಉದ್ದ, 1,690 ಎಂಎಂ ಅಗಲ ಮತ್ತು 1595 ಎತ್ತರವು ಇದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Ignis June 2025 Sales Report

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 20 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. 32 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ ಇಗ್ನಿಸ್ 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಒಳಗೊಂಡಂತೆ ಹತ್ತಾರು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Article Published On: Wednesday, July 23, 2025, 8:34 [IST]
English summary
Maruti suzuki ignis june 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+