ಬಡವರ ಪ್ರೀಮಿಯಂ ಕಾರಿದು.. 5.35 ಲಕ್ಷ, 21 ಕಿ.ಮೀ ಮೈಲೇಜ್.. ಈ ಮಾರುತಿ ಕಾರಿಗೆ ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ನವೆಂಬರ್ ತಿಂಗಳಲ್ಲೂ 'ಇಗ್ನಿಸ್' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 2316 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 2023 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 5.13% ಅಧಿಕಗೊಂಡಿದೆ.

ಇದೇ ನವೆಂಬರ್‌ನಲ್ಲಿ 'ಮಾರುತಿ ಇಗ್ನಿಸ್' ಮಾರಾಟ ಸಂಖ್ಯೆ ಏರಿಕೆಯಾಗಲು ಹಲವು ಕಾರಣಗಳಿವೆ. ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. 'ಇಗ್ನಿಸ್' ಬೆಲೆಯೂ ಇಳಿಕೆಯಾಗಿದೆ. ಜೊತೆಗಿದು ಪುಟ್ಟ ಹ್ಯಾಚ್‌ಬ್ಯಾಕ್ ಆಗಿದ್ದರೂ, ನೋಡಲು ಎಸ್‌ಯುವಿಯಂತಿದೆ. ಹೀಗಾಗಿ, ಮಾರಾಟವು ಹೆಚ್ಚಳವಾಗಿದೆ ಎಂದು ವಿಶ್ಲೇಷಿಸಲಾಗಿದೆ.

Maruti Suzuki Ignis November 2025 Sales Report

ಈ ವರ್ಷದ ಜೂನ್‌ನಿಂದ ಅಕ್ಟೋಬರ್‌ವರೆಗಿನ 5 ತಿಂಗಳ ಅವಧಿಯಲ್ಲಿಯೂ 'ಮಾರುತಿ ಸುಜುಕಿ ಇಗ್ನಿಸ್' ಕಾರುಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗಿವೆ. ಬರೋಬ್ಬರಿ 9,907 ಯುನಿಟ್‌ಗಳನ್ನು ಮಾರಲಾಗಿದೆ. ಅಂದರೆ ಪ್ರತಿ ತಿಂಗಳು ಸರಾಸರಿ 1,981 ಯುನಿಟ್‌ಗಳು ಗ್ರಾಹಕರ ಮನೆ ಸೇರಿವೆ.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ನೂತನ ಇಗ್ನಿಸ್' ರೂಪಾಂತರಗಳಿಗೆ ಅನುಗುಣವಾಗಿ ಕನಿಷ್ಠ ರೂ.5.35 ಲಕ್ಷ ಹಾಗೂ ಗರಿಷ್ಠ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಸರಳವಾದ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿದೆ.

Maruti Suzuki Ignis November 2025 Sales Report

ಇದು ಸಾಕಷ್ಟು ವಿಶಾಲವಾಗಿದೆ. 3,700 ಎಂಎಂ ಉದ್ದ, 1,690 ಎಂಎಂ ಅಗಲ ಮತ್ತು 1,595 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್ ಮತ್ತು ಟರ್ಕೋಯಿಸ್ ಬ್ಲ್ಯೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್‌) ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ. 21 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Ignis November 2025 Sales Report

ಹೊಸ 'ಮಾರುತಿ ಇಗ್ನಿಸ್' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 260 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ ಸ್ಟಾಪ್ ಬಟನ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಇದು ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲ್ಲದು. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ಸೆಂಟ್ರಲ್ ಲಾಕಿಂಗ್ ಮತ್ತು ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್‌ನ್ನು ಒಳಗೊಂಡಿದೆ. ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಟಾಟಾ ಟಿಯಾಗೊ ಹಾಗೂ ರೆನಾಲ್ಟ್ ಕ್ವಿಡ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

More from DriveSpark

Article Published On: Thursday, December 18, 2025, 17:20 [IST]
English summary
Maruti suzuki ignis november 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+