ಬಡವರ ಅಂಬಾರಿ.. 21 ಕಿ.ಮೀ ಮೈಲೇಜ್, 5.35 ಲಕ್ಷ.. ಈ ಬಂಗಾರದಂತಹ ಮಾರುತಿ ಕಾರಿಗೆ ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರನ್ನು ನೆಕ್ಸಾ ಡೀಲರ್‌ಶಿಪ್‌ ಮೂಲಕ ಯಶಸ್ವಿಯಾಗಿ ಮಾರಾಟಗೊಳಿಸಲಾಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಇಗ್ನಿಸ್' ಉತ್ತಮವಾದ ಸಂಖ್ಯೆಯಲ್ಲಿ ಮಾರಾಟವಾಗಿದೆ. ಒಟ್ಟು 2645 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2,663 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸ್ಥಿರವಾದ ಪ್ರಗತಿಯಾಗಿದೆ.

'ಮಾರುತಿ ಇಗ್ನಿಸ್' ವಿಶೇಷತೆಗಳೇನು:

ಇದು ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಹೊಂದಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಸಿಗ್ಮಾ (Sigma), ಡೆಲ್ಟಾ (Delta), ಜಿಟಾ (Zeta) ಮತ್ತು ಆಲ್ಫಾ (Alpha) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

Maruti Suzuki Ignis October 2025 Sales Report

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್ & ಟರ್ಕೋಯಿಸ್ ಬ್ಲ್ಯೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಇಗ್ನಿಸ್' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 260 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Maruti Suzuki Ignis October 2025 Sales Report

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 83 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 32 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಈ ಕಾರು 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್, ಕೀಲೆಸ್ ಎಂಟ್ರಿ ಹಾಗೂ ಪವರ್ ವಿಂಡೋಗಳು ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Maruti Suzuki Ignis October 2025 Sales Report

ನೂತನ 'ಇಗ್ನಿಸ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಅದಕ್ಕಾಗಿ ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ಸೆಂಟ್ರಲ್ ಲಾಕಿಂಗ್, ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್‌, ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ವಿಶೇಷವಾಗಿ ಟಾಟಾ ಟಿಯಾಗೊ, ಹ್ಯುಂಡೈ ಐ20, ರೆನಾಲ್ಟ್ ಕ್ವಿಡ್, ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಮಾರುತಿ ಸುಜುಕಿ ವ್ಯಾಗನ್ಆರ್, ಮಾರುತಿ ಸುಜುಕಿ ಸ್ವಿಫ್ಟ್, ಮಾರುತಿ ಸುಜುಕಿ ಆಲ್ಟೋ ಕೆ10, ಟಾಟಾ ಆಲ್ಟ್ರೋಜ್ ಹಾಗೂ ಮಾರುತಿ ಸುಜುಕಿ ಸೆಲೆರಿಯೊಗಳನ್ನು ಬದಲಿ ಕಾರುಗಳಾಗಿಯೂ ಕೊಂಡುಕೊಳ್ಳಬಹುದು.

More from DriveSpark

Article Published On: Saturday, November 22, 2025, 14:22 [IST]
English summary
Maruti suzuki ignis october 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+