ಬಡವರ ಅಂಬಾರಿ.. 5-ಸೀಟರ್, ಬರೀ 5.35 ಲಕ್ಷ ರೂಪಾಯಿ.. ಒಮ್ಮೆ ಫುಲ್ ಟ್ಯಾಂಕ್ ಮಾಡಿಸಿದ್ರೆ 668 Km ಮೈಲೇಜ್!
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಈ ಕಾರನ್ನು 'ನೆಕ್ಸಾ' ಶೋರೂಂ ಮೂಲಕ ಮಾರಾಟ ಮಾಡಲಾಗುತ್ತದೆ. ಗ್ರಾಹಕರು ಸಹ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಇದೇ 'ಇಗ್ನಿಸ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಹ್ಯಾಚ್‌ಬ್ಯಾಕ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants)
ನೂತನ 'ಮಾರುತಿ ಇಗ್ನಿಸ್' ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.5.35 ಲಕ್ಷ ಹಾಗೂ ಗರಿಷ್ಠ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ವಿನ್ಯಾಸ & ಸುತ್ತಳತೆ (Design & Dimension):
ಇದು ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 3,700 ಮಿ.ಮೀ ಉದ್ದ, 1,690 ಮಿ.ಮೀ ಅಗಲ ಹಾಗೂ 1,595 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ಬಣ್ಣಗಳು (Colours):
ಈ ಕಾರು ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್ ಹಾಗೂ ಟರ್ಕೋಯಿಸ್ ಬ್ಲ್ಯೂ ಎಂಬ ಸಿಂಗಲ್-ಟೋನ್ ಬಣ್ಣಗಳೊಂದಿಗೂ ದೊರೆಯುತ್ತದೆ. ನೆಕ್ಸಾ ಬ್ಲೂ ವಿತ್ ಬ್ಲ್ಯಾಕ್ ರೂಫ್, ಲುಸೆಂಟ್ ಆರೆಂಜ್ ವಿತ್ ಬ್ಲ್ಯಾಕ್ ರೂಫ್ ಮತ್ತು ನೆಕ್ಸಾ ಬ್ಲೂ ವಿತ್ ಸಿಲ್ವರ್ ರೂಫ್ ಎಂಬ ಡುಯಲ್-ಟೋನ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಕಾರ್ಯಕ್ಷಮತೆ (Performance):
ಹೊಸ 'ಮಾರುತಿ ಸುಜುಕಿ ಇಗ್ನಿಸ್' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) & 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಮೈಲೇಜ್ (Mileage):
ಇದು ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದ್ದು, ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ, 20.89 ಕಿಲೋಮೀಟರ್ ಮೈಲೇಜ್ ಕೊಡುತ್ತದೆ. 32 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. ಭರ್ತಿಯಾಗಿ ತುಂಬಿಸಿದರೆ 668 ಕಿಲೋಮೀಟರ್‌ಗೂ ಹೆಚ್ಚು ದೂರ ಓಡಬಲ್ಲದು.

ಒಳಾಂಗಣ & ವೈಶಿಷ್ಟ್ಯಗಳು (Interior & Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿದೆ. 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 260 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ ಸ್ಟಾಪ್ ಬಟನ್, ಕೀಲೆಸ್ ಎಂಟ್ರಿ ಮತ್ತು ಪವರ್ ವಿಂಡೋಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಹೊಸ 'ಮಾರುತಿ ಇಗ್ನಿಸ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 2-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್-ಪಾರ್ಕಿಂಗ್ ಸೇನಾರ್ಸ್, ಸೆಂಟ್ರಲ್ ಲಾಕಿಂಗ್, ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್ ಹಾಗೂ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








