ಬಡವರ ಬಂಡಿ.. 21 ಕಿ.ಮೀ ಮೈಲೇಜ್, 5.35 ಲಕ್ಷ.. ಈ Maruti Car ಕುರಿತ ಪ್ರಮುಖಾಂಶಗಳಿವು!

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಜನಮೆಚ್ಚಿದ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಇದು ಅತ್ಯಾಕರ್ಷಕವಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ನೂತನ ಕಾರೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ 'ಇಗ್ನಿಸ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಇಲ್ಲಿ ಈ ಹ್ಯಾಚ್‌ಬ್ಯಾಕ್‌ನ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ಇದು ಅಗ್ಗದ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.5.35 ಲಕ್ಷ ಹಾಗೂ ಗರಿಷ್ಠ ರೂ.7.55 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Ignis Price Design Mileage Features And All Top Things

ವಿನ್ಯಾಸ & ಬಣ್ಣಗಳು (Design & Colors):

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15 ಇಂಚಿರುವ ಅಲಾಯ್ ವೀಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್ ಮತ್ತು ಟರ್ಕೋಯಿಸ್ ಬ್ಲ್ಯೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಸುತ್ತಳತೆ (Dimension):

ಹೊಸ 'ಇಗ್ನಿಸ್' ವಿಶಾಲ ಗಾತ್ರದ ಕಾರಾಗಿದೆ. 3,700 ಮಿ.ಮೀ ಉದ್ದ, 1,690 ಮಿ.ಮೀ ಅಗಲ & 1,595 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 865 ಕೆಜಿ ತೂಕವಿದೆ.

Maruti Suzuki Ignis Price Design Mileage Features And All Top Things

ಕಾರ್ಯಕ್ಷಮತೆ (Performance):

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್, 4-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6000 ಆರ್‌ಪಿಎಂನಲ್ಲಿ 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4200 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಕಾರು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 32 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Ignis Price Design Mileage Features And All Top Things

ಆಸನ ಆಯ್ಕೆ & ವೈಶಿಷ್ಟ್ಯಗಳು (Seating Capacity & Features):

ನೂತನ 'ಇಗ್ನಿಸ್' 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 260 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ಸೆಂಟ್ರಲ್ ಲಾಕಿಂಗ್, ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್‌, ಮುಂಭಾಗ (ಫ್ರಂಟ್) ಡಿಸ್ಕ್ ಬ್ರೇಕ್‌ಗಳು ಹಾಗೂ ಹಿಂಭಾಗ ರೇರ್ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, October 22, 2025, 16:44 [IST]
English summary
Maruti suzuki ignis price design mileage features and all top things
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+