Maruti Suzuki: 20 ಕಿ.ಮೀ ಮೈಲೇಜ್.. 5-ಸೀಟರ್, ಈ ಪ್ರಮುಖ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?
ಮಾರುತಿ ಸುಜುಕಿ ಇಂಡಿಯಾ (Maruti Suzuki India), ನಂ.1 ಕಾರು ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಉತ್ಪಾದನಾ ವೆಚ್ಚಗಳು ಹೆಚ್ಚಾದ ಹಿನ್ನೆಲೆ, ಫೆ.1 ರಿಂದ ಅನ್ವಯವಾಗುವಂತೆ ಎಲ್ಲ ಕಾರುಗಳ ದರವನ್ನು ಕನಿಷ್ಠ ರೂ.1,500 ಹಾಗೂ ಗರಿಷ್ಠ ರೂ.32,500 ವರೆಗೆ ಏರಿಕೆ ಮಾಡಿತ್ತು. ಈ ಬೆಲೆ ಏರಿಕೆ ಬಿಸಿ ಜನಪ್ರಿಯ ಇಗ್ನಿಸ್ (Ignis) ಹ್ಯಾಚ್‌ಬ್ಯಾಕ್‌ಗೂ ತಟ್ಟಿದೆ. ಬನ್ನಿ.. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಕಾರಿನ ಬೆಲೆ ರೂ.6,000 ಹೆಚ್ಚಳಗೊಂಡಿದೆ. ಈ ಮೂಲಕ ಹೊಸ ಹ್ಯಾಚ್‌ಬ್ಯಾಕ್ ರೂ.5.85 ಲಕ್ಷದಿಂದ ರೂ.8.12 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಸಿಗ್ಮಾ, ಡೆಲ್ಟಾ, ಜಿಟಾ & ಆಲ್ಫಾ ಎಂಬ ಆಕರ್ಷಕ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀ. ಪೆಟ್ರೋಲ್ ಎಂಜಿನ್, 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 20.89 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.
ಹೊಸ ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್‌ಬ್ಯಾಕ್, 5 - ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಬರೋಬ್ಬರಿ 260 ಲೀ.ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಮಾರುತಿ ಇಗ್ನಿಸ್ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಅದಕ್ಕಾಗಿ ಉತ್ತಮವಾಗಿರುವ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಡಿಆರ್‌ಎಲ್‌ಗಳನ್ನು ಒಳಗೊಂಡಿದೆ. ಜೊತೆಗೆ ನೆಕ್ಸಾ ಬ್ಲೂ, ಲ್ಯೂಸೆಂಟ್ ಆರೆಂಜ್, ಸಿಲ್ಕಿ ಸಿಲ್ವರ್, ವೈಡೂರ್ಯ ಬ್ಲೂ, ಗ್ಲಿಸ್ಟೆನಿಂಗ್ ಗ್ರೇ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ ಹಲವು ಅತ್ಯಾಧುನಿಕ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 - ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್‌ಬ್ಯಾಕ್ ಸುರಕ್ಷತೆಗಯೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್ ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಒಳಗೊಂಡಿದೆ. ಈ ಕಾರಿಗೆ ಟಾಟಾ ಟಿಯಾಗೊ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications