ಅಗ್ಗದ ಮಾರುತಿ ಸುಜುಕಿ ಇಗ್ನಿಸ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು.. EMI ಏನು?

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದೆ. ಫೆ.1ಕ್ಕೆ ಅನ್ವಯವಾಗುವಂತೆ ಈ ಕಾರಿನ ಬೆಲೆ ರೂ.6,000 ಅಧಿಕಗೊಂಡಿದೆ. ಇದರೊಂದಿಗೆ ನೂತನ ಹ್ಯಾಚ್‌ಬ್ಯಾಕ್ ರೂ.5.85 ಲಕ್ಷದಿಂದ ರೂ.8.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ನೀವು ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಇಗ್ನಿಸ್ ಉತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್‌ಬ್ಯಾಕ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ದೊರೆಯುತ್ತದೆ. ಇದರ 'ಸಿಗ್ಮಾ' ರೂಪಾಂತರ, ರೂ.6.54 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಈ ಕಾರನ್ನು ಮನೆಗೆ ತಂದರೆ, ರೂ.4.54 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.9,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Ignis Price Revised New On Road Price And Emi Details

ಮಾರುತಿ ಇಗ್ನಿಸ್ ಕಾರಿನ 'ಡೆಲ್ಟಾ' ರೂಪಾಂತರ, ರೂ.7.12 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.5.12 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.9,000 ವರೆಗೆ ಇಎಂಐ ಪಾವತಿ ಮಾಡಬೇಕು.

ಈ ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್‌ಬ್ಯಾಕ್‌ನ 'ಜಿಟಾ' ರೂಪಾಂತರ, ರೂ.7.75 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.5.75 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.12,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Ignis Price Revised New On Road Price And Emi Details

ನೂತನ ಇಗ್ನಿಸ್ ಕಾರಿನ 'ಆಲ್ಪಾ' ರೂಪಾಂತರ, ರೂ.9 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.7 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.14,000 ವರೆಗೆ ಇಎಂಐ ಪಾವತಿ ಮಾಡಬೇಕು.

ಹೊಸ ಇಗ್ನಿಸ್ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಹಾಗೂ ಡಿಆರ್‌ಎಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲೂ, ಲ್ಯೂಸೆಂಟ್ ಆರೆಂಜ್, ಸಿಲ್ಕಿ ಸಿಲ್ವರ್, ವೈಡೂರ್ಯ ಬ್ಲೂ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki Ignis Price Revised New On Road Price And Emi Details

ಈ ಕಾರು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.89 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 260 ಲೀಟರ್ ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ ಮಾರುತಿ ಇಗ್ನಿಸ್ ಹ್ಯಾಚ್‌ಬ್ಯಾಕ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಹಾಗೂ ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.

ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Monday, February 24, 2025, 9:33 [IST]
English summary
Maruti suzuki ignis price revised new on road price and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+