ಈ ಗಜ ಗಾತ್ರದ ಮಾರುತಿ ಎಂಪಿವಿಗೆ ಮನಸೋತ ಗ್ರಾಹಕರು.. 8-ಸೀಟರ್, 23 Km ಮೈಲೇಜ್!
ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ದೊಡ್ಡ ಗಾತ್ರದ ಎಂಪಿವಿಯಾಗಿದೆ. ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಜುಲೈ ತಿಂಗಳಲ್ಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 351 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 251 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 39.84% ಪ್ರಗತಿಯಾಗಿದೆ.
ಈ ವರ್ಷದ ಫೆಬ್ರವರಿಯಿಂದ ಜೂನ್ ಅವಧಿವರಿಗೂ 'ಮಾರುತಿ ಸುಜುಕಿ ಇನ್ವಿಕ್ಟೋ' ಎಂಪಿವಿಯು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗಿದೆ. ಬರೋಬ್ಬರಿ 1,362 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು 272 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

ಮಾರುತಿ ಸುಜುಕಿ ಇನ್ವಿಕ್ಟೋ ವಿಶೇಷತೆಗಳೇನು:
ಈ ಎಂಪಿವಿಯು ಹೆಚ್ಚು ವಿಶಾಲವಾಗಿದ್ದು, ರೂ.25.51 ಲಕ್ಷದಿಂದ ರೂ.29.22 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದು ನೆಕ್ಸಾ ಡೀಲರ್‌ಶಿಪ್ ಮೂಲಕ ಖರೀದಿಗೆ ಲಭ್ಯವಿದ್ದು, ಜಿಟಾ (Zeta) ಹಾಗೂ ಆಲ್ಪಾ (Alpha) ಎಂಬ ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಕೂಡ ಹೊಂದಿದೆ.
ನೂತನ ಇನ್ವಿಕ್ಟೋ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಮಿಸ್ಟಿಕ್ ವೈಟ್, ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್, ನೆಕ್ಸಾ ಬ್ಲೂ ಮತ್ತು ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಇದು ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ ರೀ ಬ್ಯಾಡ್ಜ್ ಮಾಡೆಲ್ ಆಗಿದೆ. 4755 ಎಂಎಂ ಉದ್ದ, 1850 ಎಂಎಂ ಅಗಲ ಮತ್ತು 1795 ಎತ್ತರವು ಇದೆ. 185 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2850 ವೀಲ್‌ಬೇಸ್‌ನ್ನು ಪಡೆದಿದೆ. ಜೊತೆಗೆ 2,320 ಕೆಜಿ ತೂಕ ಇದೆ.
ಈ ಕಾರು 7/8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳಲು ಸಾಧ್ಯವಾಗುವಂತೆ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 289 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ ಇನ್ವಿಕ್ಟೋ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2-ಲೀಟರ್ 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 188.9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 206 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23.24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 52 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ನೋಡುಗರ ಸೆಳೆಯುವಂತಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ರೂಫ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾ ಮತ್ತು ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications