8-ಸೀಟರ್.. 23 Km ಮೈಲೇಜ್, 2 ಫ್ಯಾಮಿಲಿ ಹೋಗಬಹುದು.. ಈ ಆನೆ ಗಾತ್ರದ ಮಾರುತಿ ಎಂಪಿವಿಗೆ ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಜನಪ್ರಿಯ ಎಂಪಿವಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಈ ಜೂನ್ ತಿಂಗಳು ಈ ಕಾರು ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಒಟ್ಟು 264 ಯುನಿಟ್‌ಗಳನ್ನು ಮಾರಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.19% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 223 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

ಅದರ ಹೊರತಾಗಿಯೂ ಈ ವರ್ಷದ ಮೊದಲ 5 ತಿಂಗಳಲ್ಲೂ ಇದೇ 'ಮಾರುತಿ ಸುಜುಕಿ ಇನ್ವಿಕ್ಟೋ' ಎಂಪಿವಿ ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 1,654 ಯುನಿಟ್‌ಗಳು ಮಾರಾಟವಾಗಿವೆ. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು ಸರಿ ಸುಮಾರು 330 ಯುನಿಟ್‌ಗಳು ಮಾರಾಟಗೊಂಡಿವೆ.

Maruti Suzuki Invicto June 2025 Sales Report

ಮಾರುತಿ ಸುಜುಕಿ ಇನ್ವಿಕ್ಟೋ ವಿಶೇಷತೆಗಳೇನು:

ಇದೊಂದು ಎಂಪಿವಿಯಾಗಿದ್ದು, ನೆಕ್ಸಾ ಡೀಲರ್‌ಶಿಪ್‌ ಮೂಲಕ ಮಾರಾಟ ಮಾಡಲಾಗುತ್ತದೆ. ಕನಿಷ್ಠ ರೂ.25.51 ಲಕ್ಷ ಹಾಗೂ ಗರಿಷ್ಠ ರೂ.29.22 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರು ಜಿಟಾ ಹಾಗೂ ಆಲ್ಪಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರ ಸೆಳೆಯುವಂತಿದೆ. ಮಿಸ್ಟಿಕ್ ವೈಟ್, ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್, ನೆಕ್ಸಾ ಬ್ಲೂ ಹಾಗೂ ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 4755 ಎಂಎಂ ಉದ್ದ, 1850 ಎಂಎಂ ಅಗಲ ಹಾಗೂ 1795 ಎತ್ತರವು ಇದೆ. ಜೊತೆಗೆ 185 ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Invicto June 2025 Sales Report

ನೂತನ ಇನ್ವಿಕ್ಟೋ ಎಂಪಿವಿ ತುಂಬಾ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಏಕೈಕ 2-ಲೀಟರ್ 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23.24 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಇದರಲ್ಲಿ 7/ 8 ಆಸನಗಳಿದ್ದು, ಪ್ರಯಾಣಿಕರು ಆರಾಮಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 289 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 52 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

Maruti Suzuki Invicto June 2025 Sales Report

ಹೊಸ ಇನ್ವಿಕ್ಟೋ ಎಂಪಿವಿ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10.1-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 50+ ಕಾರ್ ಟೆಕ್ ಫೀಚರ್ಸ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿರುವ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡ್ಯುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ರೂಫ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಹಾಗೂ ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ - ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Article Published On: Wednesday, July 16, 2025, 16:02 [IST]
English summary
Maruti suzuki invicto june 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+