23 Km ಮೈಲೇಜ್.. 8-ಸೀಟರ್, ಈ ಆನೆ ಗಾತ್ರದ ಮಾರುತಿ ಕಾರಿಗೆ ಭಾರೀ ಬೇಡಿಕೆ.. ಮುಗಿಬಿದ್ದ ಜನರು!

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಜನಮೆಚ್ಚಿದ ಎಂಪಿವಿ ಎಂದೇ ಹೆಸರುವಾಸಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಕಾರಿನ ರೀ ಬ್ಯಾಡ್ಜ್ ಮಾಡೆಲ್ ಆಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಗಸ್ಟ್ ತಿಂಗಳು 'ಇನ್ವಿಕ್ಟೋ' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 237 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 174 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 36.21% ಪ್ರಗತಿಯಾಗಿದೆ.

ಮಾರುತಿ ಸುಜುಕಿ ಇನ್ವಿಕ್ಟೋ ವಿಶೇಷತೆಗಳೇನು:

ಪ್ರಸ್ತುತ ಈ ಎಂಪಿವಿಯು ಕನಿಷ್ಠ ರೂ.25.51 ಲಕ್ಷ ಹಾಗೂ ಗರಿಷ್ಠ ರೂ.29.22 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದು ಹೈಬ್ರಿಡ್ ಕಾರಾಗಿದ್ದು, ಶೇಕಡ 28% ಜಿಎಸ್‌ಟಿ ಹಾಗೂ 15% ಸೆಸ್ ಸೇರಿ, ಒಟ್ಟು 43% ತೆರಿಗೆಯನ್ನು ಹೊಂದಿತ್ತು. ಜಿಎಸ್‌ಟಿಯನ್ನು ಪರಿಷ್ಕರಿಸಲಾಗಿದೆ. ಯಾವುದೇ ಸೆಸ್ ಇಲ್ಲದೆ 'ಇನ್ವಿಕ್ಟೋ' ಮೇಲೆ ಶೇಕಡ 40% ಜಿಎಸ್‌ಟಿ ವಿಧಿಸಲಾಗುತ್ತದೆ. ಹೀಗಾಗಿ, ರೂ.61,000 ವರೆಗೆ ಬೆಲೆ ಇಳಿಕೆಯಾಗುವ ನಿರೀಕ್ಷೆಯಿದೆ. ಹೊಸ ದರಗಳು ಸೆ.22ರಿಂದ ಅಧಿಕೃತವಾಗಿ ಜಾರಿಯಾಗಲಿದೆ.

Maruti Suzuki Invicto Mpv August 2025 Sales Report

ಇದು ನೆಕ್ಸಾ ಡೀಲರ್‌ಶಿಪ್‌ ಮೂಲಕ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಜಿಟಾ ಮತ್ತು ಆಲ್ಪಾ ಎಂಬ 2 ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಸೆಳೆಯುತ್ತದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮಿಸ್ಟಿಕ್ ವೈಟ್, ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್ ಮತ್ತು ನೆಕ್ಸಾ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿಯು ವಿಶಾಲ ಗಾತ್ರದಲ್ಲಿದೆ. 4755 ಎಂಎಂ ಉದ್ದ, 1850 ಎಂಎಂ ಅಗಲ ಹಾಗೂ 1795 ಎತ್ತರ ಕೂಡ ಇದೆ. ಜೊತೆಗಿದು 185 ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ವೀಲ್‌ಬೇಸ್‌ನ್ನು ಒಳಗೊಂಡಿದೆ. 2,320 ಕೆಜಿ ತೂಕವಿದೆ.

Maruti Suzuki Invicto Mpv August 2025 Sales Report

ಈ ಕಾರು 7/ 8 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 289 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಇದು 2-ಲೀ. ಸಾಮರ್ಥ್ಯದ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23 ಕಿ.ಮೀ ವರೆಗೂ ಮೈಲೇಜ್ ನೀಡುತ್ತದೆ. 52 ಲೀಟರ್‌ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಗರಿಷ್ಠ 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Invicto Mpv August 2025 Sales Report

ಹೊಸ ಮಾರುತಿ ಇನ್ವಿಕ್ಟೋ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ರೂಫ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ - ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360 ಡಿಗ್ರಿ ಕ್ಯಾಮೆರಾದಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Wednesday, September 17, 2025, 19:02 [IST]
English summary
Maruti suzuki invicto mpv august 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+