Maruti Suzuki: ಇದು ಟೊಯೊಟಾ ಇನ್ನೋವಾದ ತದ್ರೂಪು.. ಆದರೂ ನಮಗೆ ಬೇಕಿಲ್ಲ ಅಂತಾರೆ ಗ್ರಾಹಕರು, ಕಾರಣವೇನು?
ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಪ್ರಮುಖ ಎಂಪಿವಿಯಾಗಿ ಗುರುತಿಸಿಕೊಂಡಿದೆ. ಟೊಯೊಟಾ ಹಾಗೂ ಮಾರುತಿ ಕಂಪನಿಗಳು ತಂತ್ರಜ್ಞಾನದ ಹಂಚಿಕೆ ವಿಚಾರದಲ್ಲಿ ಪಾಲುದಾರಿಕೆ ಹೊಂದಿವೆ. ಅದರ ಭಾಗವಾಗಿ 2023ರ ಜುಲೈನಲ್ಲಿ ಇನ್ನೋವಾ ಹೈಕ್ರಾಸ್ (Innova Hycross) ಆಧಾರಿತ ಇನ್ವಿಕ್ಟೋ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇದು ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿದೆ. ಆದರೂ ಈ ಎಂಪಿವಿ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದಕ್ಕೆ ಮಾರ್ಚ್ ತಿಂಗಳು ಕೂಡ ಹೊರತಾಗಿಲ್ಲ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಮಾರ್ಚ್-2025) ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್, ಸುಮಾರು 294 ಯುನಿಟ್ 'ಇನ್ವಿಕ್ಟೋ' ಎಂಪಿವಿಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 348 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಅಂಕಿಸಂಖ್ಯೆಯೂ ವರ್ಷದಿಂದ ವರ್ಷಕ್ಕೆ (YoY) ಶೇಕಡ 15.52% ಇಳಿಮುಖವಾಗಿದೆ.

ಈ ವರ್ಷಾರಂಭದಲ್ಲೂ ಸಹ 'ಮಾರುತಿ ಸುಜುಕಿ ಇನ್ವಿಕ್ಟೋ' ಎಂಪಿವಿ ಮಾರಾಟವು ಅಷ್ಟು ಚೆನ್ನಾಗಿರಲಿಲ್ಲ. ಫೆಬ್ರವರಿಯಲ್ಲಿ 380 ಹಾಗೂ ಜನವರಿ ತಿಂಗಳಲ್ಲಿ 556 ಯುನಿಟ್‌ಗಳನ್ನು ಮಾರಲಾಗಿತ್ತು. 2024ರ ಕೊನೆಯ ತ್ರೈಮಾಸಿಕದಲ್ಲೂ ಇನ್ವಿಕ್ಟೋ ಮಾರಾಟ ಸಂಖ್ಯೆಯಲ್ಲಿ ಕುಸಿತವನ್ನು ದಾಖಲಿಸಲಾಗಿದೆ. ಡಿಸೆಂಬರ್‌ನಲ್ಲಿ 825 ಯುನಿಟ್, ನವೆಂಬರ್‌ನಲ್ಲಿ 434 ಯುನಿಟ್ ಮತ್ತು ಅಕ್ಟೋಬರ್ ತಿಂಗಳಲ್ಲಿ 296 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.
ಮಾರುತಿ ಇನ್ವಿಕ್ಟೋ ಕಾರಿನ ಮಾರಾಟ ಅಂಕಿಸಂಖ್ಯೆಯೂ ಕುಸಿತವಾಗುತ್ತಿರುವ ಬಗ್ಗೆ ಕಂಪನಿಯು ಯಾವುದೇ ಅಧಿಕೃತ ಕಾರಣವನ್ನು ಬಹಿರಂಗಪಡಿಸಿಲ್ಲ. ಆದರೂ, ಹೆಚ್ಚಿನ ಬೆಲೆ ಹಾಗೂ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯನ್ನೇ ಖರೀದಿಸಲು ಗ್ರಾಹಕರು ಇಷ್ಟಪಡುತ್ತಿರುವುದರಿಂದ ಈ ಇನ್ವಿಕ್ಟೋ ಮಾರಾಟ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ.

ಮಾರುತಿ ಸುಜುಕಿ ಇನ್ವಿಕ್ಟೋ ವಿಶೇಷತೆಗಳೇನು: ಈ ಎಂಪಿವಿ ಸ್ವಲ್ಪ ಮಟ್ಟಿಗೆ ಜಾಸ್ತಿ ಬೆಲೆಯನ್ನು ಹೊಂದಿದೆ. ಇದು ರೂ.25.51 ಲಕ್ಷದಿಂದ ರೂ.29.22 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 7/ 8 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 239 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು, ಶಕ್ತಿಯುತವಾಗಿರುವ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್ ಪಡೆದಿದ್ದು, 186 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 206 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23.24 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಇನ್ವಿಕ್ಟೋ ಎಂಪಿವಿ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ರೂಫ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications