23 Km ಮೈಲೇಜ್.. 8-ಸೀಟರ್, ಇದು ಇನ್ನೋವಾ ಅಲ್ಲ.. ಈ ಗಜ ಗಾತ್ರದ ಮಾರುತಿ ಕಾರಿಗೆ ಮನಸೋತ ಗ್ರಾಹಕರು!
ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಪ್ರಮುಖ ಎಂಪಿವಿಯಾಗಿ ಹೊರಹೊಮ್ಮಿದೆ. ನೋಡಲು ತುಂಬಾ ಚೆನ್ನಾಗಿದ್ದು, ಹಲವು ಅತ್ಯಾಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ದಿನದಿಂದ ದಿನಕ್ಕೆ 'ಇನ್ವಿಕ್ಟೋ' ಮಾರಾಟವು ಸುಧಾರಿಸುತ್ತಿದೆ. ಈ ಅಕ್ಟೋಬರ್ ತಿಂಗಳು ಒಟ್ಟು 301 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 296 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 1.69% ಪ್ರಗತಿಯಾಗಿದೆ.
ಹೊಸ ಮಾರುತಿ ಸುಜುಕಿ ಇನ್ವಿಕ್ಟೋ ವಿಶೇಷತೆಗಳೇನು:
ಈ ಎಂಪಿವಿಯು 'ಟೊಯೊಟಾ ಇನ್ನೋವಾ ಹೈಕ್ರಾಸ್'ನ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ. ಕನಿಷ್ಠ ರೂ.24.97 ಹಾಗೂ ಗರಿಷ್ಠ ರೂ.28.70 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಜಿಟಾ (Zeta) ಮತ್ತು ಆಲ್ಫಾ (Alpha) ಎಂಬ 2 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16 ಇಂಚಿರುವ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮಿಸ್ಟಿಕ್ ವೈಟ್, ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್, ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್ ಮತ್ತು ನೆಕ್ಸಾ ಬ್ಲೂ ಸೆಲೆಸ್ಟಿಯಲ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ 'ಇನ್ವಿಕ್ಟೋ' ಎಂಪಿವಿ ಸಾಕಷ್ಟು ದೊಡ್ಡ ಗಾತ್ರದಲ್ಲಿದೆ. 4,755 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,795 ಎಂಎಂ ಎತ್ತರವಿದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,850 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 2,320 ಕೆಜಿ ತೂಕವಿದೆ.

ಈ ಕಾರು 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 289 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2-ಲೀ. 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 23 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 52 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ ಇನ್ವಿಕ್ಟೋ' ಎಂಪಿವಿಯ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 10.1 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಂಬಿಯೆಂಟ್ ಲೈಟಿಂಗ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 30.43 ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಪಡೆದಿದೆ.
ಇದು ಪ್ರಯಾಣಿಕರ ಹಿತದೃಷ್ಟಿಯಿಂದ ಹತ್ತಾರು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








