8-ಸೀಟರ್.. ಈ ಆನೆ ಗಾತ್ರದ ಮಾರುತಿ ಎಂಪಿವಿ ಖರೀದಿಸಬೇಕೇ.. ಆನ್-ರೋಡ್ ಬೆಲೆ ಏನು, ಇಎಂಐ ಎಷ್ಟು?

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಪ್ರಮುಖ ಎಂಪಿವಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ ರೀ-ಬ್ಯಾಡ್ಜ್ ಮಾಡೆಲ್ ಎಂದೇ ಹೆಸರುವಾಸಿಯಾಗಿದೆ. ಆದರೂ ಇವೆರೆಡು ಎಂಪಿವಿಗಳು ವಿನ್ಯಾಸ ಹಾಗೂ ವೈಶಿಷ್ಟ್ಯದಲ್ಲಿ ಸಾಕಷ್ಟು ಭಿನ್ನತೆ ಹೊಂದಿವೆ. ನೂತನ ಇನ್ವಿಕ್ಟೋ ರೂ.25.51 ಲಕ್ಷದಿಂದ ರೂ.29.22 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಎಂಪಿವಿವೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ, ಇನ್ವಿಕ್ಟೋವನ್ನು ಆಯ್ದಕೊಳ್ಳಬಹುದು. ನಾವಿಲ್ಲಿ, ಇದೇ ಕಾರಿನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಪೂರ್ಣವಾದ ತಿಳಿಸಿಕೊಟ್ಟಿದ್ದೇವೆ.

ಈ ಎಂಪಿವಿಯು ಹಲವು ವಿಧದಲ್ಲಿ ಲಭ್ಯವಿದೆ. ಇದರ 7 ಆಸನಗಳ ಜಿಟಾ ಪ್ಲಸ್ (Zeta Plus) ರೂಪಾಂತರ, 31.75 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.15 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.16.75 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.33,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Invicto Mpv On Road Price And Emi Details

ಇನ್ನೊಂದು 8 ಆಸನಗಳ ಜಿಟಾ ಪ್ಲಸ್ (Zeta Plus) ರೂಪಾಂತರ, ರೂ.31.80 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.15 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.16.80 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.34,000 ವರೆಗೆ ಇಎಂಐ ಪಾವತಿಸಬಹುದು.

ಮತ್ತೊಂದು 7 ಆಸನಗಳ ಆಲ್ಫಾ ಪ್ಲಸ್ (Alpha Plus) ರೂಪಾಂತರ, 36.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.15 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.21.30 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ 43,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Invicto Mpv On Road Price And Emi Details

ಮಾರುತಿ ಸುಜುಕಿ ಇನ್ವಿಕ್ಟೋ ವಿಶೇಷತೆಗಳೇನು:

ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಟ್ವಿನ್ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಸಿಗ್ನೇಚರ್ ಡಿಆರ್‌ಎಲ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 17-ಇಂಚಿರುವ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್, ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್, ನೆಕ್ಸಾ ಬ್ಲೂ ಹಾಗೂ ಮಿಸ್ಟಿಕ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಇನ್ವಿಕ್ಟೋ ಎಂಪಿವಿ 7/ 8 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 289 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 4755 ಎಂಎಂ ಉದ್ದ, 1850 ಎಂಎಂ ಅಗಲ & 1795 ಎತ್ತರ ಸಹ ಇದೆ. ಹಾಗೆಯೇ 185 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2850 ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Invicto Mpv On Road Price And Emi Details

ಇದು 2-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 23.24 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 52 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದ್ದು, 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರು 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ನಿಮ್ಮ ಗಮನಕ್ಕೆ.. ಇದೇ 'ಇನ್ವಿಕ್ಟೋ' ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Wednesday, August 6, 2025, 17:01 [IST]
English summary
Maruti suzuki invicto mpv on road price and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+