ಪ್ರೀಮಿಯಂ ಫಿಚರ್ಸ್, 23 ಕಿ.ಮೀ ಮೈಲೇಜ್: ಮಾರುತಿಯ 7-ಸೀಟರ್ ಕಾರಿನ ಬೆಲೆ ಏರಿಕೆ ಶಾಕ್.. ಎಷ್ಟು?

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ನೆಕ್ಸಾ (NEXA) ಹಾಗೂ ಅರೆನಾ (Arena) ಡೀಲರ್‌ಶಿಪ್ ಮೂಲಕ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ಕಾರುಗಳನ್ನು ಮಾರಾಟಗೊಳಿಸುತ್ತಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಆದರೆ ಮಾರುತಿ ಸುಜುಕಿ ತನ್ನ ಎಲ್ಲಾ ಮಾದರಿಗಳ ಶ್ರೇಣಿಯಲ್ಲಿ ಬೆಲೆ ಏರಿಕೆಯನ್ನು ಘೋಷಿಸಿದೆ. ಫೆಬ್ರವರಿ 1 ರಿಂದ ಈ ಬೆಲೆ ಏರಿಕೆಯು ಜಾರಿಯಾಗಲಿದೆ.

ಮಾರುತಿ ಸರಣಿಯ ಕಾರುಗಳಲ್ಲಿ ಇನ್ವಿಕ್ಟೋ ದೊಡ್ಡ ಎಂಪಿವಿಯಾಗಿದೆ. ಈ ಮಾರುತಿ ಇನ್ವಿಕ್ಟೋ ಮಾದರಿಯು ಟೊಯೊಟಾ ಇನ್ನೋವಾ ಹೈಕ್ರಾಸ್ ಅನ್ನು ಆಧರಿಸಿದೆ. ಈ ಮಾರುತಿ ಇನ್ವಿಕ್ಟೋ ಕಾರಿನ ಬೆಲೆಯು ರೂ.30,000 ವರೆಗೆ ಏರಿಕೆಯಾಗಲಿದೆ. ಈ ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಕಾರಿನ ಎಂಪಿವಿಯು ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಮೊದಲನೆಯದು ಝೀಟಾ ರೂಪಾಂತರವಾಗಿದೆ, ಮತ್ತು ಇನ್ನೊಂದು ಆಲ್ಫಾ ರೂಪಾಂತರವಾಗಿದೆ.

Maruti Suzuki Invicto

ಟೊಯೊಟಾ ಇನ್ನೋವಾ ಹೈಕ್ರಾಸ್ ಮಾದರಿಯ ಅಭಿಮಾನಿಗಳಾಗಿದ್ದರೆ, ದೀರ್ಘ ಕಾಯುವ ಅವಧಿಯ ಮೂಲಕ ಕಾಯಲು ಬಯಸದಿದ್ದರೆ ಅಥವಾ ವಾಹನಕ್ಕೆ ರೂ 3-4 ಲಕ್ಷದ ಕಡಿಮೆ ಬೆಲೆಯಲ್ಲಿ ಮಾರುತಿ ಸುಜುಕಿ ಇನ್ವಿಕ್ಟೊ ನಿಮಗೆ ಉತ್ತಮ ಪರ್ಯಾಯ ಆಯ್ಕೆಯಾಗಿದೆ. ಮಾರುತಿ ಸುಜುಕಿ ಇನ್ವಿಕ್ಟೋ ಕಾರಿನಲ್ಲಿ ಮಿಸ್ಟಿಕ್ ವೈಟ್, ನೆಕ್ಸಾ ಬ್ಲೂ, ಮೆಜೆಸ್ಟಿಕ್ ಸಿಲ್ವರ್ ಸೇರಿದಂತೆ 4 ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.

ಇದು ನೋಡಲು ಕೊಂಚ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂವಿಪಿಯಂತೆ ಕಾಣುತ್ತದೆ. 7, 8 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಈ ಮಾರುತಿ ಸುಜುಕಿ ಇನ್ವಿಕ್ಟೋ, 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 186 PS ಗರಿಷ್ಠ ಪವರ್ ಹಾಗೂ 206 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

Maruti Suzuki Invicto

ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರು ಇ-ಸಿವಿಟಿ (e-CVT) ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿದಾರರಿಗೆ ದೊರೆಯುತ್ತದೆ. ಈ ಮಾರುತಿ ಸುಜುಕಿ ಕಾರಿನಲ್ಲಿ 23.24 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ ಕೇವಲ 9.5 ಸೆಕೆಂಡುಗಳಲ್ಲಿ0 ರಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

ಈ ಮಾರುತಿ ಕಾರಿನಲ್ಲಿ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 50+ ಕನೆಕ್ಟ್ದ್ ಕಾರ್ ಟೆಕ್ ಫೀಚರ್ಸ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ರೂಫ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ಹತ್ತಾರು ಫೀಚರ್ಸ್ ಗಳನ್ನು ಒಳಗೊಂಡಿದೆ.

Maruti Suzuki Invicto

ಇನ್ನು ಈ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಅತ್ಯಾಧುನಿಕವಾಗಿದೆ. 6 ಏರ್‌ಬ್ಯಾಗ್ಸ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) 360 ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಹೊಂದಿದೆ. ಈ ಕಾರಿಗೆ ಕಿಯಾ ಕ್ಯಾರೆನ್ಸ್‌ ಪ್ರಬಲ ಎದುರಾಳಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 30, 2025, 18:04 [IST]
English summary
Maruti suzuki invicto mpv price hiked details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+