23 Km ಮೈಲೇಜ್.. 8-ಸೀಟರ್, 5-ಸ್ಟಾರ್ ಸೇಫ್ಟಿ.. ಆದ್ರೂ ಈ ಆನೆ ಗಾತ್ರದ ಮಾರುತಿ ಎಂಪಿವಿ ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ, ಯಾಕೆ?

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಬೃಹದಾಕಾರದ ಎಂಪಿವಿಯಾಗಿದೆ. ಇದು 'ಟೊಯೊಟಾ ಇನ್ನೋವಾ ಹೈಕ್ರಾಸ್‌'ನ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆಯೂ ಕುಸಿತವಾಗುತ್ತಿದೆ. ಅದು ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರಿದಿದ್ದು, ಕೇವಲ 215 ಯುನಿಟ್‌ಗಳನ್ನು ಮಾತ್ರ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 312 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -31% ಇಳಿಕೆಯಾಗಿದೆ.

ಸೆಪ್ಟೆಂಬರ್‌ನಲ್ಲಿ 'ಮಾರುತಿ ಇನ್ವಿಕ್ಟೋ' ಮಾರಾಟ ಸಂಖ್ಯೆ ಕುಸಿತವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ, ಈ ಕಾರು ದುಬಾರಿ ಬೆಲೆಯನ್ನು ಹೊಂದಿದ್ದು, ಗ್ರಾಹಕರು ಅಗ್ಗದ ಎಂವಿಪಿಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜೊತೆಗೆ ಬಹುತೇಕರು 'ಇನ್ನೋವಾ ಹೈಕ್ರಾಸ್‌'ನ್ನು ಕೊಂಡುಕೊಳ್ಳಲು ಒಲವು ತೋರಿಸಿರುವ ಹಿನ್ನೆಲೆ, 'ಇನ್ವಿಕ್ಟೋ' ಮಾರಾಟವು ಇಳಿಮುಖವಾಗಿದೆ ಎನ್ನಲಾಗಿದೆ.

Maruti Suzuki Invicto Mpv September 2025 Sales Report

ಹೊಸ ಮಾರುತಿ ಸುಜುಕಿ ಇನ್ವಿಕ್ಟೋ ವಿಶೇಷತೆಗಳೇನು:

ಈ ಎಂಪಿವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದ್ದು ಕನಿಷ್ಠ ರೂ.24.97 ಲಕ್ಷ ಹಾಗೂ ಗರಿಷ್ಠ ರೂ.28.60 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಜಿಟಾ ಮತ್ತು ಆಲ್ಪಾ ಎಂಬ ಎರಡು ಅತ್ಯಾಧುನಿಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ದಾರಿ ಹೋಕರನ್ನು ಸೆಳೆಯಬಲ್ಲದು. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 16 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ ಸೆಲೆಸ್ಟಿಯಲ್, ಮಿಸ್ಟಿಕ್ ವೈಟ್, ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್ & ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್ ಎಂಬ ಬಣ್ಣಗಳನ್ನು ಪಡೆದಿದೆ.

Maruti Suzuki Invicto Mpv September 2025 Sales Report

ನೂತನ 'ಇನ್ವಿಕ್ಟೋ' ವಿಶಾಲವಾಗಿದೆ. 4,755 ಮಿ.ಮೀ ಉದ್ದ, 1,850 ಎಂಎಂ ಅಗಲ ಹಾಗೂ 1,795 ಮಿ.ಮೀ ಎತ್ತರವಿದೆ. ಜೊತೆಗಿದು 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,850 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 2,320 ಕೆಜಿ ತೂಕವಿದೆ.

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್, 6,000 ಆರ್‌ಪಿಎಂನಲ್ಲಿ 152 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,200 ಆರ್‌ಪಿಎಂನಲ್ಲಿ 188 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Maruti Suzuki Invicto Mpv September 2025 Sales Report

ಇದು ಒಳ್ಳೆಯ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 23 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 52 ಲೀಟರ್‌ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ ಕೂಡ ಇದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ 'ಇನ್ವಿಕ್ಟೋ' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ರೂಪಾಂತರಗಳಿಗೆ ಅನುಗುಣವಾಗಿ 7/8 ಆಸನಗಳನ್ನು ಒಳಗೊಂಡಿದೆ. ಜಾಸ್ತಿ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 289 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದದಲ್ಲಿ ಸುರಕ್ಷತೆಯನ್ನು ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Tuesday, October 14, 2025, 16:57 [IST]
English summary
Maruti suzuki invicto mpv september 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+