23 Km ಮೈಲೇಜ್.. 8-ಸೀಟರ್, ಆನೆ ಗಾತ್ರದ ಮಾರುತಿ ಕಾರಿದು.. ಆದ್ರೂ ಖರೀದಿಸಲು ಗ್ರಾಹಕರಿಂದ ಹಿಂದೇಟು.. ಯಾಕೆ?
ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಪ್ರಖ್ಯಾತ ಎಂಪಿವಿಯಾಗಿ ಹೊರಹೊಮ್ಮಿದೆ. ಆದರೂ, ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಂಠಿತವಾಗುತ್ತಿದೆ. ಅದು ನವೆಂಬರ್ ತಿಂಗಳಲ್ಲೂ ಮುಂದುವರಿದೆ. ಒಟ್ಟು 410 ಯುನಿಟ್‌ಗಳನ್ನು ಮಾತ್ರ ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ -5.53% ಇಳಿಮುಖವಾಗಿದೆ.
ನೂತನ 'ಇನ್ವಿಕ್ಟೋ' ಮಾರಾಟ ಸಂಖ್ಯೆ ಕುಸಿತವಾಗಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು ದುಬಾರಿ ಬೆಲೆಯನ್ನು ಹೊಂದಿದೆ. ಜೊತೆಗಿದು 'ಟೊಯೊಟಾ ಇನ್ನೋವಾ ಹೈಕ್ರಾಸ್'ನ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಹೀಗಾಗಿ, ಮಾರಾಟ ಸಂಖ್ಯೆಯೂ ಇಳಿಕೆಯಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ವರ್ಷದ ಜೂನ್‌ನಿಂದ ಅಕ್ಟೋಬರ್‌ವರೆಗಿನ 5 ತಿಂಗಳಲ್ಲೂ'ಮಾರುತಿ ಸುಜುಕಿ ಇನ್ವಿಕ್ಟೋ' ಮಾರಾಟದಲ್ಲಿ ಹಲವು ಏರುಪೇರುಗಳಾಗಿವೆ. ಬರೋಬ್ಬರಿ 1,368 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಅಂದರೆ ಪ್ರತಿ ತಿಂಗಳು 273 ಯುನಿಟ್‌ಗಳು ಮಾರಾಟವಾಗಿವೆ. ನೂತನ 'ಇನ್ವಿಕ್ಟೋ' ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ರೂ.24.97 ಲಕ್ಷದಿಂದ ರೂ.28.61 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ.
ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 4,755 ಮಿ.ಮೀ ಉದ್ದ, 1,850 ಮಿ.ಮೀ ಅಗಲ ಹಾಗೂ 1,795 ಮಿ.ಮೀ ಎತ್ತರವಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,850 ಮೀ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಚ್ಚ ಹೊಸ 'ಮಾರುತಿ ಇನ್ವಿಕ್ಟೋ' ಮಿಸ್ಟಿಕ್ ವೈಟ್, ಮೆಜೆಸ್ಟಿಕ್ ಸಿಲ್ವರ್, ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್ ಮತ್ತು ನೆಕ್ಸಾ ಬ್ಲೂ ಸೆಲೆಸ್ಟಿಯಲ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 7/ 8 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 289 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 188.9 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 206 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 23.24 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ.

ಇದರ ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ನೂತನ 'ಮಾರುತಿ ಇನ್ವಿಕ್ಟೋ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಯಾಗಿವೆ. ಟಾಟಾ ಸಫಾರಿ (Tata Safari), ಹ್ಯುಂಡೈ ಅಲ್ಕಾಜರ್ (Hyundai Alcazar), ಎಂಜಿ ಹೆಕ್ಟರ್ ಪ್ಲಸ್ (MG Hector Plus) ಹಾಗೂ ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಕಾರುಗಳು ಪ್ರಬಲವಾದ ಎದುರಾಳಿಯಾಗಿವೆ.


Click it and Unblock the Notifications








