ಬೆಲೆಯೂ ಕಮ್ಮಿ: ಈ Maruti Suvಗೆ ಬೇಡಿಕೆಯೇ ಇರಲಿಲ್ಲ.. ಆದರೆ, ಏಪ್ರಿಲ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟ!

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny), ಜನಪ್ರಿಯ ಆಫ್-ರೋಡ್ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ಇದು ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೇ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅದರ ಹೊರತಾಗಿಯೂ ಈ ಎಸ್‌ಯುವಿ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಆದರೆ ಇದೇ ಏಪ್ರಿಲ್‌ನಲ್ಲಿ 'ಜಿಮ್ನಿ'ಯನ್ನು ಖರೀದಿದಾರರು ಕೂಡ ಮುಗಿಬಿದ್ದು ಕೊಂಡಿಕೊಂಡಿದ್ದಾರೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿಯು ಸರಿ ಸುಮಾರು 431 ಯುನಿಟ್ 'ಜಿಮ್ನಿ' ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 257 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 67.70% ಪ್ರಗತಿಯಾಗಿದೆ.

Maruti Suzuki Jimny April 2025 Sales Details

ಈ ವರ್ಷದ ಮೊದಲ ತಿಂಗಳು ಕೂಡ 'ಮಾರುತಿ ಸುಜುಕಿ ಜಿಮ್ನಿ' ಎಸ್‌ಯುವಿಗಳ ಮಾರಾಟ ಸಂಖ್ಯೆ ಅಷ್ಟು ಚೆನ್ನಾಗಿರಲ್ಲ. ಅಲ್ಲಿಯೂ ಹಲವು ಏರಿಳಿತಗಳನ್ನು ಕಾಣಲಾಗಿತ್ತು. ಮಾರ್ಚ್‌ನಲ್ಲಿ 261 ಯುನಿಟ್, ಫೆಬ್ರವರಿಯಲ್ಲಿ 385 ಯುನಿಟ್ ಮತ್ತು ಜನವರಿ ತಿಂಗಳಲ್ಲಿ 163 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

ಮಾರುತಿ ಸುಜುಕಿ ಜಿಮ್ನಿ ವಿಶೇಷತೆಗಳೇನು..

ಈ ಎಸ್‌ಯುವಿ ಸ್ವಲ್ಪ ಮಟ್ಟಿಗೆ ಕಡಿಮೆ ಬೆಲೆಗೆ ಖರೀದಿಗೆ ದೊರೆಯಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಇದು ರೂ.12.76 ಲಕ್ಷದಿಂದ ರೂ.14.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 4 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.

Maruti Suzuki Jimny April 2025 Sales Details

ನೂತನ ಜಿಮ್ನಿ ಎಸ್‌ಯುವಿ ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದು 1.5-ಲೀ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 105 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 134.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ರಿಂದ 17 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಮಾರುತಿ ಜಿಮ್ನಿ ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಗ್ರಾನೈಟ್ ಗ್ರೇ, ನೆಕ್ಸಾ ಬ್ಲೂ & ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಬಿಟಾ & ಆಲ್ಫಾ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 211 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

Maruti Suzuki Jimny April 2025 Sales Details

ಈ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) & ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, May 19, 2025, 19:30 [IST]
English summary
Maruti suzuki jimny april 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+