ಟೈಗರ್ ಅಭಿ ಜಿಂದಾ ಹೈ.. ಬೆಲೆಯೂ ಕಮ್ಮಿ, ಈ ಪ್ರಖ್ಯಾತ ಮಾರುತಿ ಎಸ್‌ಯುವಿ ಮಾರಾಟ ದಿಢೀರ್ ಏರಿಕೆ!

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny), ಜನಪ್ರಿಯ ಆಫ್-ರೋಡ್ ಎಸ್‌ಯುವಿಯಾಗಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಆದರೂ ಈ ಎಸ್‌ಯುವಿ ಮಾರಾಟ ಮಾತ್ರ ದಿನದಿಂದ ದಿನಕ್ಕೆ ಕುಸಿತವಾಗುತ್ತಿತ್ತು. ಸದ್ಯ ಮಾರುತಿ ಸುಜುಕಿ ಎಲ್ಲ ಕಾರುಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದೆ. ಅದರಲ್ಲೂ ಜಿಮ್ನಿಗೆ ಗ್ರಾಹಕರಿಂದ ಉತ್ತಮವಾದ ಸ್ಪಂದನೆ ವ್ಯಕ್ತವಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಫೆಬ್ರವರಿ - 2025) ಮಾರುತಿ ಸುಜುಕಿ ಇಂಡಿಯಾ ಸರಿ ಸುಮಾರು 385 ಯುನಿಟ್ 'ಜಿಮ್ನಿ' ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 322 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 19.57% ಪ್ರಗತಿಯನ್ನು ಸಾಧಿಸಲಾಗಿದೆ. ಆದರೆ, ಜನವರಿಯಲ್ಲಿ 163 ಯುನಿಟ್ ಜಿಮ್ನಿ ಕಾರುಗಳು ಮಾತ್ರ ಮಾರಾಟವಾಗಿದ್ದವು.

Maruti Suzuki Jimny February 2025 Sales Details

2024ರ ದ್ವಿತೀಯಾರ್ಧದಲ್ಲಿ ಕೂಡ ಮಾರುತಿ ಸುಜುಕಿ ಜಿಮ್ನಿಯ ಮಾರಾಟದಲ್ಲಿ ಹಾವು - ಏಣಿ ಆಟ ಮುಂದುವರಿದಿತ್ತು. ಡಿಸೆಂಬರ್‌ನಲ್ಲಿ 1,100 ಯುನಿಟ್, ನವೆಂಬರ್‌ನಲ್ಲಿ 988 ಯುನಿಟ್, ಅಕ್ಟೋಬರ್‌ನಲ್ಲಿ 1,211 ಹಾಗೂ ಸೆಪ್ಟೆಂಬರ್‌ನಲ್ಲಿ 599 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ ಜಿಮ್ನಿ ಎಸ್‌ಯುವಿ ಕನಿಷ್ಠ ರೂ.12.76 ಲಕ್ಷ ಹಾಗೂ ಗರಿಷ್ಠ ರೂ.15.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ಈ ಕಾರು ಬಿಟಾ & ಆಲ್ಫಾ ಎಂಬ ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಗ್ರಾನೈಟ್ ಗ್ರೇ, ನೆಕ್ಸಾ ಬ್ಲೂ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Jimny February 2025 Sales Details

ನೂತನ ಮಾರುತಿ ಸುಜುಕಿ ಜಿಮ್ನಿ ಶಕ್ತಿಯುತವಾದ 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದ್ದು, 16 ರಿಂದ 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರೊಟ್ಟಿಗೆ 4ಡಬ್ಲ್ಯೂಡಿ (ಫೋರ್ ವೀಲ್ ಡ್ರೈವ್) ಟೆಕ್ನಾಲಜಿಯನ್ನು ಒಳಗೊಂಡಿದೆ.

ಈ ಎಸ್‌ಯುವಿಯಲ್ಲಿ 4 ಜನರು ಸುಲಭವಾಗಿ ಪ್ರಯಾಣ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 211 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (9-ಇಂಚು) ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Jimny February 2025 Sales Details

ಹೊಸ ಮಾರುತಿ ಸುಜುಕಿ ಜಿಮ್ನಿ ಎಸ್‌ಯುವಿ ಸುರಕ್ಷತೆಗೂ ಹೆಸರುವಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) & ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಕಂಟ್ರೋಲ್, ರೇರ್ ವ್ಯೂ ಕ್ಯಾಮೆರಾ ಹಾಗೂ 3 - ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, March 18, 2025, 16:58 [IST]
English summary
Maruti suzuki jimny february 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+