17 ಕಿ.ಮೀ ಮೈಲೇಜ್, 12 ಲಕ್ಷ.. ಇದು ಹುಲಿಯಂತಹ ಕಾರಿದು.. ಆದ್ರೂ ಗ್ರಾಹಕರು ಖರೀದಿಸುತ್ತಿಲ್ಲ, ಯಾಕೆ?

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ವಿಶ್ವಾಸಾರ್ಹ ಆಫ್-ರೋಡ್ ಎಸ್‌ಯುವಿಯಾಗಿದೆ. ಇದು ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಜುಲೈನಲ್ಲೂ ಮುಂದುವರಿದಿದ್ದು, ಕೇವಲ 362 ಯುನಿಟ್‌ಗಳನ್ನು ಮಾತ್ರ ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 2429 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -85.10% ಇಳಿಮುಖವಾಗಿದೆ.

ಈ ವರ್ಷದ ಫೆಬ್ರವರಿಯಿಂದ ಜೂನ್ ತಿಂಗಳ ಅವಧಿಯಲ್ಲೂ 'ಮಾರುತಿ ಜಿಮ್ನಿ' ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಒಟ್ಟು 2,130 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ, ಪ್ರತಿ ತಿಂಗಳು 426 ಯುನಿಟ್‌ಗಳನ್ನು ಮಾರಾಟಹೋಲಿಸಲಾಗಿದೆ.

Maruti Suzuki Jimny July 2025 Sales Report

ಮಾರುತಿ ಸುಜುಕಿ ಜಿಮ್ನಿ ಮಾರಾಟ ಸಂಖ್ಯೆ ಕುಂಠಿತವಾಗಲು ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಇದರ ಪ್ರತಿಸ್ಪರ್ಧಿ 'ಮಹಿಂದ್ರಾ ಥಾರ್'ಗೆ ಹೋಲಿಕೆ ಮಾಡಿದರೆ, ನೋಡಲು ಪುಟ್ಟ ಎಸ್‌ಯುವಿಯಂತೆ ಕಾಣುತ್ತದೆ. ಜೊತೆಗಿದು ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ದೊರೆಯಲಿದ್ದು, ಥಾರ್‌ನಂತೆ ಡೀಸೆಲ್ ಎಂಜಿನ್‌ನ್ನು ಪಡೆದಿಲ್ಲ. ಹೀಗಾಗಿ ಜಿಮ್ನಿ ಮಾರಾಟವು ಇಳಿಕೆಯಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ಜಿಮ್ನಿ ವಿಶೇಷತೆಗಳೇನು:

ಇದೊಂದು ಆಫ್-ರೋಡ್ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಆದರೂ ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.12.76 ಲಕ್ಷ ಹಾಗೂ ಗರಿಷ್ಠ ರೂ.14.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಆಲ್ಫಾ ಮತ್ತು ಡೆಲ್ಟಾ ಎಂಬ 2 ಅತ್ಯಾಧುನಿಕ ರೂಪಾಂತರಗಳೊಂದಿಗೆ (ವೇರಿಯೆಂಟ್) ಲಭ್ಯವಿದೆ.

Maruti Suzuki Jimny July 2025 Sales Report

ಈ ಕಾರು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಹೆವಿ ವೀಲ್ ಅರ್ಚ್ ಕ್ಲಾಡಿಂಗ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಗ್ರಾನೈಟ್ ಗ್ರೇ, ಬ್ಲ್ಯೂಯಿಸ್ ಬ್ಲ್ಯಾಕ್, ಸಿಜ್ಲಿಂಗ್ ರೆಡ್, ನೆಕ್ಸಾ ಬ್ಲ್ಯೂ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಜಿಮ್ನಿ 3985 ಎಂಎಂ ಉದ್ದ, 1645 ಎಂಎಂ ಅಗಲ ಹಾಗೂ 1720 ಎಂಎಂ ಎತ್ತರವು ಇದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2590 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1545 ಕೆಜಿ ತೂಕವು ಇದೆ. 4 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು 208 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

Maruti Suzuki Jimny July 2025 Sales Report

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಪಡೆದಿದ್ದು, 6000 ಆರ್‌ಪಿಎಂನಲ್ಲಿ 105 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4000 ಆರ್‌ಪಿಎಂನಲ್ಲಿ 134.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ರಿಂದ 17 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 40 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಹೊಸ ಜಿಮ್ನಿ 155 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 4.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಟೋ ಎಸಿ ಮತ್ತು ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ರೇರ್ ವ್ಯೂ ಕ್ಯಾಮೆರಾ, ಹಿಲ್ ಹೋಲ್ಡ್ ಕಂಟ್ರೋಲ್ ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.

Article Published On: Friday, August 22, 2025, 8:30 [IST]
English summary
Maruti suzuki jimny july 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+