17 ಕಿ.ಮೀ ಮೈಲೇಜ್, 12 ಲಕ್ಷ.. ಈ ಜನಪ್ರಿಯ Maruti Suvಗೆ ಫುಲ್ ಡಿಮ್ಯಾಂಡ್.. ಭಾರೀ ಸಂಖ್ಯೆಯಲ್ಲಿ ಮಾರಾಟ!

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಪ್ರಮುಖ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರನ್ನು ಮಹೀಂದ್ರಾ ಥಾರ್ ರಾಕ್ಸ್ ಹಾಗೂ ಫೋರ್ಸ್ ಗೂರ್ಖಾ ಎಸ್‌ಯುವಿಗಳಿಗೆ ಎದುರಾಳಿಯಾಗಿ ಮಾರಾಟಗೊಳಿಸಲಾಗುತ್ತದೆ. ಅದರ ಹೊರತಾಗಿಯೂ ದಿನದಿಂದ ದಿನಕ್ಕೆ 'ಜಿಮ್ನಿ' ಮಾರಾಟ ಸಂಖ್ಯೆ ಕುಸಿತವಾಗುತ್ತಿತ್ತು. ಅದು ಈ 'ಮೇ'ನಲ್ಲೂ ಮುಂದುವರಿಯಬಹುದು ಎಂದು ಅಂದಾಜಿಸಲಾಗಿತ್ತು. ಸದ್ಯ, ಅಂತಹ ಊಹಾಪೋಹಗಳಿಗೆ ಪೂರ್ಣ ವಿರಾಮ ಬಿದ್ದಿದ್ದು, ಇದೇ 'ಜಿಮ್ನಿ' ಎಸ್‌ಯುವಿಗಳನ್ನು ದಾಖಲೆ ಸಂಖ್ಯೆಯಲ್ಲಿ ಮಾರಾಟಗೊಳಿಸಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಮೇ - 2025) ಮಾರುತಿ ಸುಜುಕಿ ಇಂಡಿಯಾ, ಒಟ್ಟು 682 ಯುನಿಟ್ 'ಜಿಮ್ನಿ' ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2024ರ ಮೇನಲ್ಲಿ ಮಾರಲ್ಪಟ್ಟ 274 ಯುನಿಟ್‌ಗಳಿಗೆ ಹೋಲಿಸಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಸರಿ ಸುಮಾರು 148% ಬೆಳವಣಿಗೆಯಾಗಿದೆ.

Maruti Suzuki Jimny May 2025 Sales Details

ಈ ವರ್ಷದ ಮೊದಲ 4 ತಿಂಗಳಲ್ಲೂ ಮಾರುತಿ ಸುಜುಕಿ ಜಿಮ್ನಿ ಎಸ್‌ಯುವಿ ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಆದರೂ ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೇ ಮಾರಾಟಗೊಳಿಸಲಾಗಿದೆ. ಏಪ್ರಿಲ್‌ನಲ್ಲಿ 431 ಯುನಿಟ್, ಮಾರ್ಚ್‌ನಲ್ಲಿ 261 ಯುನಿಟ್, ಫೆಬ್ರವರಿಯಲ್ಲಿ 385 ಯುನಿಟ್ ಹಾಗೂ ಜನವರಿಯಲ್ಲಿ 163 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಮಾರುತಿ ಸುಜುಕಿ ಜಿಮ್ನಿ ಎಸ್‌ಯುವಿ ಮಾರಾಟ ಸಂಖ್ಯೆ ಮತ್ತೆ ಏರಿಕೆ ಹಾದಿಯಲ್ಲಿರುವುದಕ್ಕೆ ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರಿನ ಮಾರಾಟ ಪ್ರಮಾಣವನ್ನು ಹೆಚ್ಚಿಸಲು ದೊಡ್ಡ ಮಟ್ಟದ ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಹಿನ್ನೆಲೆ, ಗ್ರಾಹಕರು ಕೂಡ ನಿಧಾನವಾಗಿ 'ಜಿಮ್ನಿ' ಖರೀದಿಯತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಮಾರಾಟ ಸಂಖ್ಯೆ ಅಧಿಕಗೊಳ್ಳುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Maruti Suzuki Jimny May 2025 Sales Details

ಮಾರುತಿ ಸುಜುಕಿ ಜಿಮ್ನಿ ವಿಶೇಷತೆಗಳೇನು:

ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.12.76 ಲಕ್ಷ ಹಾಗೂ ಗರಿಷ್ಠ ರೂ.14.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಆಲ್ಫಾ ಹಾಗೂ ಡೆಲ್ಟಾ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಗ್ರಾನೈಟ್ ಗ್ರೇ, ನೆಕ್ಸಾ ಬ್ಲೂ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ ಪಡೆದಿದ್ದು, 105 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 134.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16 ರಿಂದ 17 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

Maruti Suzuki Jimny May 2025 Sales Details

ಇದರಲ್ಲಿ 4 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 208 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಎಸಿ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ನೂತನ ಮಾರುತಿ ಜಿಮ್ನಿ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಕಂಟ್ರೋಲ್ ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.

Article Published On: Friday, June 13, 2025, 13:17 [IST]
English summary
Maruti suzuki jimny may 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+