17 ಕಿ.ಮೀ ಮೈಲೇಜ್, 12 ಲಕ್ಷ.. ಹೊಸ ಮಾರುತಿ ಎಸ್‌ಯುವಿ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ವಿಶ್ವಾಸಾರ್ಹ ಆಫ್-ರೋಡ್ ಎಸ್‌ಯುವಿಯಾಗಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಹೀಗಾಗಿ, ಮಾರಾಟ ಪ್ರಮಾಣವು ಸ್ಥಿರವಾಗಿದೆ. ನೀವು ಹೊಚ್ಚ ಹೊಸ 'ಜಿಮ್ನಿ' ಎಸ್‌ಯುವಿ ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ನಾವಿಲ್ಲಿ, ಈ ಕಾರಿನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ನೂತನ ಮಾರುತಿ ಸುಜುಕಿ ಜಿಮ್ನಿ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ 'ಜಿಟಾ' ರೂಪಾಂತರ, ರೂ.15.60 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಈ ಕಾರನ್ನು ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಮನೆಗೆ ತಂದರೆ, ರೂ.10.60 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.21,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Jimny On Road Price And Emi Details

ಇದೇ ಕಾರಿನ ಆಲ್ಫಾ ರೂಪಾಂತರ, ರೂ.16.70 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ, ಖರೀದಿ ಮಾಡಿದರೆ, ರೂ.11.60 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷದ ಅವಧಿ ಮಾಸಿಕ ರೂ.23,000 ವರೆಗೆ ಇಎಂಐ ಪಾವತಿ ಮಾಡಬೇಕು.

ಈ ಜಿಮ್ನಿ ಎಸ್‌ಯುವಿಯ ಜಿಟಾ ಎಟಿ (ಆಟೋಮೆಟಿಕ್ ಟ್ರಾನ್ಸ್ಮಿಷನ್/ ಗೇರ್‌ಬಾಕ್ಸ್‌) ರೂಪಾಂತರ, ರೂ.17 ಲಕ್ಷ ಆನ್-ರೋಡ್ ದರವನ್ನು ಹೊಂದಿದೆ. ಇದನ್ನು ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ತೆಗೆದುಕೊಂಡರೆ, ರೂ.12 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ 24,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Jimny On Road Price And Emi Details

ಹೊಸ ಮಾರುತಿ ಜಿಮ್ನಿ ಕಾರಿನ ಆಲ್ಫಾ ಡುಯಲ್ ಟೋನ್ ರೂಪಾಂತರ, ರೂ.15.80 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.10.80 ಲಕ್ಷವರೆಗೆ ಸಾಲಯಿರುತ್ತದೆ. ಅದಕ್ಕೆ ಶೇಕಡ ಶೇಕಡ 8% ಬಡ್ಡಿ ಹಾಕಿ, 5 ವರ್ಷದ ಅವಧಿ ಮಾಸಿಕ ರೂ.22,000ವರೆಗೆ ಇಎಂಐ ಪಾವತಿ ಮಾಡಬೇಕು.

ಮಾರುತಿ ಸುಜುಕಿ ಜಿಮ್ನಿ ವಿಶೇಷತೆಗಳೇನು:

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರನ್ನು ಸೆಳೆಯುವಂತಿದೆ. ಬ್ಲ್ಯೂಯಿಸ್ ಬ್ಲ್ಯಾಕ್, ಸಿಜ್ಲಿಂಗ್ ರೆಡ್, ನೆಕ್ಸಾ ಬ್ಲ್ಯೂ, ಪರ್ಲ್ ಆರ್ಕ್ಟಿಕ್ ವೈಟ್ ಹಾಗೂ ಗ್ರಾನೈಟ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದು 3985 ಎಂಎಂ ಉದ್ದ, 1645 ಎಂಎಂ ಅಗಲ ಮತ್ತು 1720 ಎಂಎಂ ಎತ್ತರವು ಇದೆ. ಜೊತೆಗೆ 2590 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Jimny On Road Price And Emi Details

ಇದರಲ್ಲಿ 4 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 208 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 40 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

ನೂತನ ಜಿಮ್ನಿ ಎಸ್‌ಯುವಿ ಬಲಿಷ್ಠವಾದ 1.5-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ರಿಂದ 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ನಾವಿಲ್ಲಿ ಈ ಮಾರುತಿ ಜಿಮ್ನಿಯ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Saturday, July 12, 2025, 11:15 [IST]
English summary
Maruti suzuki jimny on road price and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+