Maruti Suzuki: ಬೆಲೆಯೂ ಅಗ್ಗ.. ಇದು ಶಕ್ತಿಯುತ ಎಸ್‌ಯುವಿ, ಆದರೂ ಬೇಡವೇ ಬೇಡ ಎನ್ನುತ್ತಿದ್ದಾರೆ ಗ್ರಾಹಕರು!

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny), ಪ್ರಖ್ಯಾತ ಆಫ್-ರೋಡ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದ್ದು, ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೆ, ನಾನಾ ಕಾರಣಗಳಿಗೆ ದಿನದಿಂದ ದಿನಕ್ಕೆ ಇದೇ ಜಿಮ್ನಿ ಮಾರಾಟ ಸಂಖ್ಯೆಯಲ್ಲಿಯೂ ಕುಸಿತವಾಗುತ್ತಿದೆ. ಅದಕ್ಕೆ ಮಾರ್ಚ್ ತಿಂಗಳು ಕೂಡ ಹೊರತಾಗಿಲ್ಲ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಹೋದ ತಿಂಗಳು (ಮಾರ್ಚ್-2025) ಮಾರುತಿ ಸುಜುಕಿಯು ಕೇವಲ 261 ಯುನಿಟ್ 'ಜಿಮ್ನಿ' ಎಸ್‌ಯುವಿಗಳನ್ನು ಮಾತ್ರ ಮಾರಾಟಗೊಳಿಸಲು ಯಶಸ್ವಿಯಾಗಿದೆ. 2024ರ ಮಾರ್ಚ್‌ನಲ್ಲಿ 318 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶಗಳಿಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -17.92% ಇಳಿಕೆಯಾಗಿದೆ.

Maruti Suzuki Jimny Suv March 2025 Sales Details

ಈ ವರ್ಷದ ಮೊದಲೆರೆಡು ತಿಂಗಳು ಸಹ ಜಿಮ್ನಿ ಮಾರಾಟದಲ್ಲಿ ಕಂಪನಿಯು ಹಲವು ಏರಿಳಿತಗಳನ್ನು ಕಂಡಿದೆ. ಫೆಬ್ರವರಿಯಲ್ಲಿ 385 ಹಾಗೂ ಜನವರಿಯಲ್ಲಿ 163 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದೇ 2024ರ ಕೊನೆಯ ಮೂರು ತಿಂಗಳು ಜಿಮ್ನಿ ಮಾರಾಟ ಪ್ರಮಾಣ ಒಂದಷ್ಟು ಮಟ್ಟಿಗೆ ಚೆನ್ನಾಗಿತ್ತು. ಡಿಸೆಂಬರ್‌ನಲ್ಲಿ 1,100 ಯುನಿಟ್, ನವೆಂಬರ್‌ನಲ್ಲಿ 988 ಯುನಿಟ್ ಹಾಗೂ ಅಕ್ಟೋಬರ್‌ನಲ್ಲಿ 1,211 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

ಸದ್ಯ, ಮಾರುತಿ ಸುಜುಕಿ ಜಿಮ್ನಿ ಮಾರಾಟ ಸಂಖ್ಯೆ ಇಳಿಮುಖವಾಗುತ್ತಿರುವ ಬಗ್ಗೆ ಕಂಪನಿಯು ಯಾವುದೇ ಸ್ಪಷ್ಟವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಆದರೆ, ಮಹೀಂದ್ರಾ ಥಾರ್ ಎಸ್‌ಯುವಿಯ ತೀವ್ರ ಸ್ಪರ್ಧೆ.. ಬೆಲೆ.. ಒಂದಷ್ಟು ವಿನ್ಯಾಸದ ವಿಚಾರವಾಗಿ ಈ ಕಾರಿನ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Maruti Suzuki Jimny Suv March 2025 Sales Details

ಮಾರುತಿ ಸುಜುಕಿ ಜಿಮ್ನಿ ವಿಶೇಷತೆಗಳೇನು: ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದೆ. ಕನಿಷ್ಠ ರೂ.12.75 ಲಕ್ಷ ಹಾಗೂ ಗರಿಷ್ಠ ರೂ.14.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 4 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 208 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಎಸ್‌ಯುವಿ 1.5-ಲೀ. ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 16 ರಿಂದ 17 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಗ್ರಾನೈಟ್ ಗ್ರೇ, ನೆಕ್ಸಾ ಬ್ಲೂ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಜೊತೆಗೆ ಅತ್ಯಾಧುನಿಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

Maruti Suzuki Jimny Suv March 2025 Sales Details

ನೂತನ ಮಾರುತಿ ಜಿಮ್ನಿ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಆಟೋ ಎಸಿಗಳನ್ನು ಒಳಗೊಂಡಿದೆ. ಈ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) & ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, April 24, 2025, 17:33 [IST]
English summary
Maruti suzuki jimny suv march 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+