33 Km ಮೈಲೇಜ್.. 5-ಸೀಟರ್, ಈ ಮಾರುತಿ ಕಾರಿಗೆ ಡಿಮ್ಯಾಂಡ್ ಇಲ್ಲ.. ಸೆ.22ರಿಂದ 3.50 ಲಕ್ಷಕ್ಕೆ ಲಭ್ಯ!

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಜಗಮೆಚ್ಚಿದ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಆಗಸ್ಟ್ ತಿಂಗಳು 'ಎಸ್-ಪ್ರೆಸ್ಸೊ' ಮಾರಾಟ ಸಂಖ್ಯೆ ಇಳಿಕೆಯಾಗಿದೆ. ಒಟ್ಟು 1,333 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2,102 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -37% ಕುಸಿತವಾಗಿದೆ.

ಈ ಆಗಸ್ಟ್‌ನಲ್ಲಿ ನೂತನ 'ಮಾರುತಿ ಎಸ್-ಪ್ರೆಸ್ಸೊ' ಮಾರಾಟ ಪ್ರಮಾಣವು ಇಳಿಮುಖವಾಗಲು ನಾನಾ ಕಾರಣಗಳಿವೆ. ಆಗಲೇ ನೂತನ ಕಾರುಗಳ ಖರೀದಿ ಮೇಲೆ ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತಗಳಿಸಲಿದೆ ಎಂಬ ಸುಳಿವು ಗ್ರಾಹಕರಿಗೆ ಸಿಕ್ಕಿತ್ತು. ಜೊತೆಗೆ ಎಸ್‌ಯುವಿಗಳಿಗೆ ಉತ್ತಮ ಬೇಡಿಕೆಯಿರುವುದರಿಂದಲೂ ಎಸ್-ಪ್ರೆಸ್ಸೊ ಮಾರಾಟವು ಕುಂಠಿತವಾಗಿದೆ ಎನ್ನಲಾಗಿದೆ.

Maruti Suzuki S-Presso August 2025 Sales Details

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ವಿಶೇಷತೆಗಳೇನು:

ಪ್ರಸ್ತುತ ಈ ಹ್ಯಾಚ್‌ಬ್ಯಾಕ್ ರೂ.4.26 ಲಕ್ಷದಿಂದ ರೂ.6.12 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಜಿಎಸ್‌ಟಿ ಪರಿಷ್ಕಕರಣೆಗೊಂಡಿದೆ. ಅದರ ಸಂಪೂರ್ಣ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವುದಕ್ಕೆ ಮಾರುತಿ ಸುಜುಕಿಯು ತೀರ್ಮಾನಿಸಿದೆ. ಇದೇ 'ಎಸ್-ಪ್ರೆಸ್ಸೊ' ಬೆಲೆಯನ್ನು ರೂ.1.29 ಲಕ್ಷ ಇಳಿಕೆ ಮಾಡಿದ್ದು, ರೂ.3.50 ಲಕ್ಷ ಆರಂಭಿಕ ದರವನ್ನು ಪಡೆದಿದೆ. ಸೆ.22ರಿಂದ ಅಧಿಕೃತವಾಗಿ ಮಾನ್ಯವಾಗಲಿದೆ.

ನೂತನ 'ಮಾರುತಿ ಎಸ್-ಪ್ರೆಸ್ಸೊ' ತುಂಬಾ ನೋಡಲು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಟ್ವಿನ್ ಚೇಂಬರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಸಿಗ್ನೇಚರ್ ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 14-ಇಂಚಿರುವ ಟೈರ್‌ಗಳನ್ನು ಒಳಗೊಂಡಿದೆ. ಬ್ಲೂಯಿಶ್ ಬ್ಲ್ಯಾಕ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್ ಮತ್ತು ಪರ್ಲ್ ಸ್ಟಾರ್ರಿ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು ವಿಶಾಲ ಗಾತ್ರದಲ್ಲಿದೆ. 3,565 ಎಂಎಂ ಉದ್ದ, 1,520 ಎಂಎಂ ಅಗಲ ಹಾಗೂ 1,553 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 854 ಕೆಜಿ ತೂಕ ಕೂಡ ಇದೆ.

ಹೊಸ ಎಸ್-ಪ್ರೆಸ್ಸೊ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀ. ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 27 ಲೀಟರ್ ಸಾಮರ್ಥ್ಯದ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 5 ಸೆಕೆಂಡುಗಳನ್ನು 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್ ಸಿಸ್ಟಮ್, ಪವರ್ ವಿಂಡೋಗಳು, ಕೀಲೆಸ್ ಎಂಟ್ರಿ ಹಾಗೂ ಯುಎಸ್‌ಬಿ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 2 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

More from DriveSpark

Article Published On: Saturday, September 20, 2025, 8:48 [IST]
English summary
Maruti suzuki s presso august 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+