33 ಕಿ.ಮೀ ಮೈಲೇಜ್.. 5-ಸೀಟರ್, 4 ಲಕ್ಷ.. ಆದರೂ ಈ ಮಾರುತಿ ಕಾರಿಗೆ ಡಿಮ್ಯಾಂಡ್ ಕುಸಿತ, ಯಾಕೆ?
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೂ ಈ ಮಾರಾಟ ಸಂಖ್ಯೆಯು ಕುಸಿತವಾಗುತ್ತಿದೆ. ಅದು ಜುಲೈನಲ್ಲೂ ಮುಂದುವರಿದಿದೆ. ಒಟ್ಟು 912 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2607 ಯುನಿಟ್‌ಗಳನ್ನು ಮಾರಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -65.02% ಇಳಿಕೆಯಾಗಿದೆ.
ಈ ವರ್ಷದ ಫೆಬ್ರವರಿಯಿಂದ ಜೂನ್ ತಿಂಗಳವರೆಗೂ 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 7,374 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು 1,474 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಮಾರಾಟ ಸಂಖ್ಯೆ ಕುಸಿತವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿದೆ. ಈ ಕಾರಿನ ಬೆಲೆಗಿಂತ ಸ್ವಲ್ಪ ಹೆಚ್ಚಿನ ಹಣವನ್ನು ಪಾವತಿ ಮಾಡಿದರೆ, ಹೊಚ್ಚ ಹೊಸ ಎಸ್‌ಯುವಿಯನ್ನು ಖರೀದಿ ಮಾಡಬಹುದು. ಹಾಗೆಯೇ ಇದು ಪುಟ್ಟದಾದ ಹ್ಯಾಚ್‌ಬ್ಯಾಕ್ ಆಗಿದ್ದು, ಹಲವರು ದೊಡ್ಡ ಗಾತ್ರದ ಕಾರನ್ನು ತೆಗೆದುಕೊಳ್ಳಲು ಆಸಕ್ತಿ ವಹಿಸುತ್ತಿದ್ದಾರೆ. ಹೀಗಾಗಿ ಎಸ್-ಪ್ರೆಸ್ಸೊ ಮಾರಾಟ ಇಳಿಕೆಯಾಗುತ್ತಿದೆ ಎಂದು ಹೇಳಲಾಗಿದೆ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ ವಿಶೇಷತೆಗಳೇನು:
ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಖರೀದಿ ಮಾಡಬಹುದು. ರೂ.4.26 ಲಕ್ಷದಿಂದ ರೂ.6.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಟ್ವಿನ್ ಚೇಂಬರ್ ಹೆಡ್‌ಲ್ಯಾಂಪ್‌ಗಳು, ಸಿ-ಆಕಾರಕ್ಕೆ ಹೋಲಿಕೆಯಾಗಬಲ್ಲ ಸಿಗ್ನೇಚರ್ ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 14-ಇಂಚಿರುವ ಟೈರ್‌ಗಳನ್ನು ಪಡೆದಿದೆ. ಬ್ಲೂಯಿಶ್ ಬ್ಲ್ಯಾಕ್, ಸಾಲಿಡ್ ಸಿಜಲ್ ಆರೆಂಜ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್ ಹಾಗೂ ಪರ್ಲ್ ಸ್ಟಾರ್ರಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಎಸ್-ಪ್ರೆಸ್ಸೊ 3565 ಎಂಎಂ ಉದ್ದ, 1520 ಎಂಎಂ ಅಗಲ ಮತ್ತು 1553 ಎಂಎಂ ಎತ್ತರವು ಇದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2380 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 854 ಕೆಜಿ ತೂಕವು ಇದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 270 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಯುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಮತ್ತೊಂದು 1-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್ 57 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಲಭ್ಯವಾಗುತ್ತದೆ. 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್ ಸಿಸ್ಟಮ್, ಪವರ್ ವಿಂಡೋಗಳು, ಕೀಲೆಸ್ ಎಂಟ್ರಿ, ಬ್ಲೂಟೂತ್ & ಯುಎಸ್‌ಬಿ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications








