Maruti: 32.73 Km ಮೈಲೇಜ್.. 5-ಸೀಟರ್, ಈ ಮಾರುತಿ ಕಾರನ್ನು ಖರೀದಿಸಲು ಗ್ರಾಹಕರಿಂದ ಹಿಂದೇಟು.. ಏಕೆ?

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗಲಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಲೇ ಇದೆ. ಅದಕ್ಕೆ ಈ ಮಾರ್ಚ್ ತಿಂಗಳು ಕೂಡ ಹೊರತಾಗಿಲ್ಲ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಮಾರ್ಚ್-2025) ಮಾರುತಿ ಸುಜುಕಿ ಇಂಡಿಯಾ ಸರಿ ಸುಮಾರು 1,788 ಯುನಿಟ್ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 2,497 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶಗಳಿಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -28% ಇಳಿಮುಖವಾಗಿದೆ.

Maruti Suzuki S-Presso Car March 2025 Sales Details

ಈ ವರ್ಷಾರಂಭದ ಮೊದಲೆರೆಡು ತಿಂಗಳು ಸಹ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನ ಮಾರಾಟ ಸಂಖ್ಯೆಯು ತೀವ್ರತರದಲ್ಲಿ ಕುಸಿತವಾಗಿದೆ. ಅದರಲ್ಲೂ ಫೆಬ್ರವರಿಯಲ್ಲಿ 1,685 ಯುನಿಟ್ ಹಾಗೂ ಜನವರಿಯಲ್ಲಿ 2,895 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಹೋದ ವರ್ಷವು ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್ ಮಾರಾಟ ಅಷ್ಟು ಚೆನ್ನಾಗಿರಲಿಲ್ಲ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಮಾರಾಟ ಸಂಖ್ಯೆ ಕುಸಿತವಾಗುತ್ತಿರುವ ಬಗ್ಗೆ ಯಾವುದೇ ನಿಖರವಾದ ಕಾರಣವನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಆದರೂ 10 ಲಕ್ಷದೊಳಗೆ ಎಸ್‌ಯುವಿ, ಸೆಡಾನ್ ಹಾಗೂ ಎಂಪಿವಿಗಳು ಖರೀದಿಗೆ ದೊರೆಯುತ್ತಿರುವುದರಿಂದ ಎಸ್-ಪ್ರೆಸ್ಸೊ ಮಾರಾಟವು ಇಳಿಕೆಯಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಈ ಮಾರಾಟ ಸಂಖ್ಯೆ ಮತ್ತಷ್ಟು ಅಧಿಕಗೊಳ್ಳುವ ನಿರೀಕ್ಷೆಯಿದೆ.

Maruti Suzuki S-Presso Car March 2025 Sales Details

ಸದ್ಯ ದೇಶೀಯವಾಗಿ ಖರೀದಿಗೆ ಲಭ್ಯವಿರುವ ನೂತನ ಮಾರುತಿ ಎಸ್-ಪ್ರೆಸ್ಸೊ ಕಾರು, ಕನಿಷ್ಠ ರೂ.4.26 ಲಕ್ಷ ಮತ್ತು ಗರಿಷ್ಠ ರೂ.6.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಜಾಸ್ತಿ ಲಗೇಜ್ ತೆಗೆದುಕೊಂಡು ಹೋಗಲು 270 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಹ್ಯಾಚ್‌ಬ್ಯಾಕ್ 1-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24.12 ರಿಂದ 32.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸಾಲಿಡ್ ಸಿಜಲ್ ಆರೆಂಜ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಪರ್ಲ್ ಸ್ಟಾರ್ರಿ ಬ್ಲೂ ಮತ್ತು ಬ್ಲೂಯಿಶ್ ಬ್ಲ್ಯಾಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki S-Presso Car March 2025 Sales Details

ನೂತನ ಎಸ್-ಪ್ರೆಸ್ಸೊ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, April 19, 2025, 11:23 [IST]
English summary
Maruti suzuki s presso car march 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+