ಬಡವರಿಗೆ ಬೆಸ್ಟ್.. 33 Km ಮೈಲೇಜ್, 3.50 ಲಕ್ಷ.. ಈ ಮಾರುತಿ ಕಾರಿಗೆ ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso), ಅತಿ ಕಡಿಮೆ ಬೆಲೆಗೆ ದೊರೆಯುವ ಹ್ಯಾಚ್‌ಬ್ಯಾಕ್ ಆಗಿದೆ. ಇದು ನೋಡಲು ತುಂಬಾ ಸರಳವಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಎಸ್-ಪ್ರೆಸ್ಸೊ' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 2,857 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 2,139 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ಶೇಕಡ 33.57% ಬೆಳವಣಿಗೆಯಾಗಿದೆ.

ಆದರೂ ಇದೇ ವರ್ಷದ ಮೇ ತಿಂಗಳಿನಿಂದ ಸೆಪ್ಟೆಂಬರ್‌ವರೆಗೆ 'ಮಾರುತಿ ಎಸ್-ಪ್ರೆಸ್ಸೊ' ಮಾರಾಟವು ಸಾಧಾರಣವಾಗಿತ್ತು. ಸರಿ ಸುಮಾರು 7,631 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿತ್ತು. ಈ ಅಂಕಿ ಅಂಶಗವನ್ನು ವಿಶ್ಲೇಷಿಸಿದಾಗ ಪ್ರತಿ ತಿಂಗಳು ಸರಾಸರಿ 1,526 ಕಾರುಗಳು ಮಾರಾಟಗೊಂಡಿವೆ.

Maruti Suzuki S-Presso Car October 2025 Sales Details

ಕಳೆದ ತಿಂಗಳು (ಅಕ್ಟೋಬರ್ 2025) 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ಹ್ಯಾಚ್‌ಬ್ಯಾಕ್ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್‌ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ಬೆಲೆಯಲ್ಲಿಯೂ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೊತೆಗೆ ದೀಪಾವಳಿ ಹಬ್ಬವಿದ್ದರಿಂದ 'ಎಸ್-ಪ್ರೆಸ್ಸೊ'ವನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಖರೀದಿಸಿದ್ದಾರೆ ಎಂದು ಹೇಳಲಾಗಿದೆ.

'ಮಾರುತಿ ಎಸ್-ಪ್ರೆಸ್ಸೊ' ವಿಶೇಷತೆಗಳೇನು:

ಇದು ಕನಿಷ್ಠ ರೂ.3.50 ಲಕ್ಷ ಹಾಗೂ ಗರಿಷ್ಠ ರೂ.5.25 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಸ್ಟ್ಯಾಂಡರ್ಡ್ (STD), ಎಲ್ಎಕ್ಸ್ಐ (LXi), ವಿಎಕ್ಸ್ಐ (VXi) ಹಾಗೂ ವಿಎಕ್ಸ್ಐ ಪ್ಲಸ್ (VXi Plus) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki S-Presso Car October 2025 Sales Details

ನೂತನ 'ಎಸ್-ಪ್ರೆಸ್ಸೊ' ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 14-ಇಂಚಿನ ವೀಲ್‌ಗಳನ್ನು ಹೊಂದಿದೆ. ಸಾಲಿಡ್ ಫೈರ್ ರೆಡ್, ಸಾಲಿಡ್ ಸಿಜ್ಲ್ ಆರೆಂಜ್, ಪರ್ಲ್ ಸ್ಟಾರಿ ಬ್ಲೂ, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ವೈಟ್ & ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು 2 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀ. ಪೆಟ್ರೋಲ್ ಎಂಜಿನ್, 68.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 91 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.12 ರಿಂದ 25.30 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಮತ್ತೊಂದು 1-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್, 57 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 32.73 ಕಿ.ಮೀವರೆಗೆ ಕೊಡುತ್ತದೆ.

ಇದು 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್ ಸಿಸ್ಟಮ್, ಪವರ್ ವಿಂಡೋಗಳು, ಯುಎಸ್‌ಬಿ ಕನೆಕ್ಟಿವಿಟಿ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್, ಆಟೋ ಡೋರ್ ಲಾಕ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

More from DriveSpark

Article Published On: Friday, November 14, 2025, 13:15 [IST]
English summary
Maruti suzuki s presso car october 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+