32.73 Km ಮೈಲೇಜ್.. 5-ಸೀಟರ್, 4 ಲಕ್ಷ.. ಈ Maruti Car ಕೊಳ್ಳಲು ಗ್ರಾಹಕರಿಗೆ ನಿರಾಸಕ್ತಿ.. ಕಾರಣವೇನು?

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನೇ ದಿನ ಕುಸಿತವಾಗುತ್ತಿದೆ. ಅದು ಈ ಮೇ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 1806 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2,227 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 18.90% ಕುಸಿತವಾಗಿದೆ.

ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲೂ 'ಎಸ್-ಪ್ರೆಸ್ಸೊ' ಕಾರಿನ ಮಾರಾಟ ಸಂಖ್ಯೆಯಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಏಪ್ರಿಲ್‌ನಲ್ಲಿ 726 ಯುನಿಟ್, ಮಾರ್ಚ್‌ನಲ್ಲಿ 1,788 ಯುನಿಟ್, ಫೆಬ್ರವರಿಯಲ್ಲಿ 1,685 ಯುನಿಟ್ ಹಾಗೂ ಜನವರಿಯಲ್ಲಿ 2,895 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿದೆ.

Maruti Suzuki S-Presso May 2025 Sales Details

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್ ಮಾರಾಟ ಪ್ರಮಾಣವು ಇಳಿಮುಖವಾಗಲು ಹಲವು ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಈ ಕಾರಿನ ದರಕ್ಕೆ ಬೇರೆ ಕಂಪನಿಗಳ ಅತ್ಯಾಕರ್ಷಕವಾದ ಹ್ಯಾಚ್‌ಬ್ಯಾಕ್, ಸೆಡಾನ್ ಮತ್ತು ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ. ಗ್ರಾಹಕರು ಅವುಗಳತ್ತ ಒಲವನ್ನು ತೋರಿಸುತ್ತಿದ್ದಾರೆ. ಹೀಗಾಗಿ, ಮಾರಾಟ ಸಂಖ್ಯೆ ಕುಸಿತವಾಗುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ವಿಶೇಷತೆಗಳೇನು:

ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಈ ಕಾರು ರೂ.4.26 ಲಕ್ಷದಿಂದ ರೂ.6.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ವಿಎಕ್ಸ್ಐ ಪ್ಲಸ್ ಎಂಬ ಸೇರಿದಂತೆ ವಿವಿಧ ಅತ್ಯಾಧುನಿಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki S-Presso May 2025 Sales Details

ನೂತನ 'ಎಸ್-ಪ್ರೆಸ್ಸೊ' ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಸಾಲಿಡ್ ಸಿಜಲ್ ಆರೆಂಜ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಪರ್ಲ್ ಸ್ಟಾರ್ರಿ ಬ್ಲೂ ಮತ್ತು ಬ್ಲೂಯಿಶ್ ಬ್ಲ್ಯಾಕ್ ಬಣ್ಣಗಳೊಂದಿಗೂ ಗ್ರಾಹಕರ ಖರೀದಿಗೆ ದೊರೆಯುತ್ತದೆ.

ಈ ಕಾರು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1-ಲೀ. ಸಾಮರ್ಥ್ಯದ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.12 ರಿಂದ 32.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Maruti Suzuki S-Presso May 2025 Sales Details

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 270 ಲೀಟರ್‌ ಸಾಮರ್ಥ್ಯವಿರುವ ಬೂಟ್ ಸ್ಪೇಸ್‌ನ್ನು ಪಡೆದಿದೆ. ಜೊತೆಗೆ ಈ ಕಾರು 3565 ಎಂಎಂ ಉದ್ದ, 1520 ಎಂಎಂ ಅಗಲ ಹಾಗೂ 1553 ಎಂಎಂ ಎತ್ತರವು ಇದೆ.

ಹೊಸ 'ಎಸ್-ಪ್ರೆಸ್ಸೊ' ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಕೀಲೆಸ್ ಎಂಟ್ರಿಯನ್ನು ಹೊಂದಿದೆ. 27 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2380 ಎಂಎಂ ವೀಲ್ ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

Article Published On: Monday, June 23, 2025, 12:58 [IST]
English summary
Maruti suzuki s presso may 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+