33 ಕಿ.ಮೀ ಮೈಲೇಜ್.. ಕೇವಲ 3.50 ಲಕ್ಷ, ಆದರೂ ಈ ಜನಪ್ರಿಯ ಮಾರುತಿ ಕಾರನ್ನು ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ.. ಯಾಕೆ?

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ನೋಡಲು ತುಂಬಾ ಸರಳವಾಗಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಈ ನವೆಂಬರ್ ತಿಂಗಳಲ್ಲೂ ಅದು ಮುಂದಿವರಿದಿದೆ. ಒಟ್ಟು 1,747 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 2,283 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಸಂಖ್ಯೆಯಲ್ಲಿ ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -23.48 ಕುಸಿತವಾಗಿದೆ.

ಇದೇ ನವೆಂಬರ್‌ನಲ್ಲಿ 'ಮಾರುತಿ ಎಸ್-ಪ್ರೆಸ್ಸೊ' ಮಾರಾಟ ಸಂಖ್ಯೆ ಇಳಿಮುಖವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ, ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಎಲ್ಲ ಕಂಪನಿಯ ಕಾರುಗಳ ಬೆಲೆಯೂ ಕಡಿಮೆಯಾಗಿದೆ. ಇದರಿಂದಾಗಿ ಖರೀದಿದಾರರು ಹ್ಯಾಚ್‌ಬ್ಯಾಕ್‌ಗಳ ಬದಲಾಗಿ, ಎಸ್‌ಯುವಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಜೊತೆಗೆ 'ಎಸ್-ಪ್ರೆಸ್ಸೊ'ದ ವೈಶಿಷ್ಟ್ಯಗಳಲ್ಲೂ ಕೊರತೆಯಿದೆ. ಹೀಗಾಗಿ, ಗ್ರಾಹಕರು ಖರೀದಿಸಲು ಮನಸ್ಸು ಮಾಡುತ್ತಿಲ್ಲ ಎನ್ನಲಾಗಿದೆ.

Maruti Suzuki S-Presso November 2025 Sales Decline Details

ಜೂನ್‌ನಿಂದ ಅಕ್ಟೋಬರ್ ತಿಂಗಳವರೆಗೂ 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 8,245 ಯುನಿಟ್‌ಗಳನ್ನು ಮಾರಾಟ ಮಾಡಲಾಗದೆ. ಅಂದರೆ ಪ್ರತಿ ತಿಂಗಳು ಸರಾಸರಿ 1,649 ಯುನಿಟ್‌ಗಳು ಮಾರಾಟವಾಗಿವೆ. ನೂತನ 'ಎಸ್-ಪ್ರೆಸ್ಸೊ' ರೂಪಾಂತರಗಳಿಗೆ ಅನುಗುಣವಾಗಿ ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. 3,565 ಎಂಎಂ ಉದ್ದ, 1,520 ಎಂಎಂ ಅಗಲ ಹಾಗೂ 1,553 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

Maruti Suzuki S-Presso November 2025 Sales Decline Details

ನೂತನ 'ಎಸ್-ಪ್ರೆಸ್ಸೊ' 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಸಾಲಿಡ್ ಫೈರ್ ರೆಡ್, ಸಾಲಿಡ್ ಸಿಜಲ್ ಆರೆಂಜ್, ಪರ್ಲ್ ಸ್ಟಾರ್ರಿ ಬ್ಲೂ, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ವೈಟ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀ. ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 5 ಸೆಕೆಂಡುಗಳನ್ನು 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್ ಸಿಸ್ಟಮ್, ಪವರ್ ವಿಂಡೋಗಳು, ಯುಎಸ್‌ಬಿ ಕನೆಕ್ಟಿವಿಟಿ, ಫ್ರಂಟ್ ಡೋರ್‌ಗಳಲ್ಲಿ 1 ಲೀಟರ್ ಬಾಟಲ್ ಹೋಲ್ಡರ್‌ಗಳು ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ 'ಮಾರುತಿ ಎಸ್-ಪ್ರೆಸ್ಸೊ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 2 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್ ಲಾಕಿಂಗ್, ಆಟೋ ಡೋರ್ ಲಾಕ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ. ಇದಕ್ಕೆ ರೆನಾಲ್ಟ್ ಕ್ವಿಡ್ ಹಾಗೂ ಟಾಟಾ ಟಿಯಾಗೊಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Sunday, December 14, 2025, 20:35 [IST]
English summary
Maruti suzuki s presso november 2025 sales decline details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+