33 ಕಿ.ಮೀ ಮೈಲೇಜ್.. 4 ಲಕ್ಷ.. ಈ ಮಾರುತಿ ಕಾರನ್ನು ತೆಗೆದುಕೊಳ್ಳಬೇಕೇ, ಆನ್-ರೋಡ್ ಬೆಲೆ ಏನು.. EMI ಇಷ್ಟೇನಾ?
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ರೂ.4.26 ಲಕ್ಷದಿಂದ ರೂ.6.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ಎಸ್-ಪ್ರೆಸ್ಸೊ' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಹ್ಯಾಚ್‌ಬ್ಯಾಕ್ ವಿವಿಧ ರೂಪದಲ್ಲಿ ಸಿಗುತ್ತದೆ. ಇದರ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.3.50 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.7,000 ವರೆಗೆ ಇಐಎಂ ಕಟ್ಟಬೇಕು.

ಇನ್ನೊಂದು ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.3.80 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.8,000 ವರೆಗೆ ಇಐಎಂ ಪಾವತಿ ಮಾಡಬೇಕು.
ಮತ್ತೊಂದು ವಿಎಕ್ಸ್ಐ ಪ್ಲಸ್ (ಪೆಟ್ರೋಲ್) ರೂಪಾಂತರ, ರೂ.6.70 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.4.20 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.8,000 ವರೆಗೆ ಇಐಎಂ ಕಟ್ಟಬೇಕು.

ಇದೇ ಕಾರಿನ ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.7.20 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.4.70 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.9,500 ವರೆಗೆ ಇಐಎಂ ಪಾವತಿಸಬೇಕು.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ ವಿಶೇಷತೆಗಳೇನು:
ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಬ್ಲೂಯಿಶ್ ಬ್ಲ್ಯಾಕ್, ಸಾಲಿಡ್ ಸಿಜಲ್ ಆರೆಂಜ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ ಹಾಗೂ ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2380 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ ಎಸ್-ಪ್ರೆಸ್ಸೊ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. . 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.
ಇದು 5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗಲು 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ವಿಂಡೋಗಳು, ಕೀಲೆಸ್ ಎಂಟ್ರಿ ಹಾಗೂ ಯುಎಸ್‌ಬಿ ಕನೆಕ್ಟಿವಿಟಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಮಾರುತಿ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಯ ಕುರಿತಂತೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








