ಬಡವರ ಬಂಡಿ.. ರೂ.3.50 ಲಕ್ಷ, 33 Km ಮೈಲೇಜ್.. 5-ಸೀಟರ್, ಈ ಮಾರುತಿ ಕಾರಿನ ಕುರಿತ ಪ್ರಮುಖಾಂಶಗಳಿವು!
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಎಲ್ಲ ವರ್ಗದ ಗ್ರಾಹಕರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ನೀವು ಹೊಚ್ಚ ಹೊಸ ಹ್ಯಾಚ್‌ಬ್ಯಾಕ್‌ನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ 'ಎಸ್-ಪ್ರೆಸ್ಸೊ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಈ ಹ್ಯಾಚ್‌ಬ್ಯಾಕ್ ಅತಿ ಕಡಿಮೆ ಬೆಲೆಗೆ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಎಲ್ಎಕ್ಸ್ಐ (ಒ), ವಿಎಕ್ಸ್ಐ (ಒ) ಹಾಗೂ ವಿಎಕ್ಸ್ಐ ಪ್ಲಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ನೋಡುಗರ ಸೆಳೆಯುವಂತಹ ಸರಳವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 14 ಇಂಚಿನ ಟೈರ್‌ಗಳನ್ನು ಪಡೆದಿದೆ. ಸಾಲಿಡ್ ಫೈರ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮೆಟಾಲಿಕ್ ಗ್ರಾನೈಟ್ ಗ್ರೇ ಹಾಗೂ ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimensions):
ನೂತನ 'ಎಸ್-ಪ್ರೆಸ್ಸೊ' ಸ್ವಲ್ಪ ಮಟ್ಟಿಗೆ ವಿಶಾಲ ಗಾತ್ರದಲ್ಲಿದೆ. 3,565 ಮಿ.ಮೀ ಉದ್ದ, 1,520 ಮಿ.ಮೀ ಅಗಲ ಮತ್ತು 1,553 ಮಿ.ಮೀ ಎತ್ತರವಿದೆ. ಜೊತೆಗಿದು 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 854 ಕೆಜಿ ತೂಕವಿದೆ. 27 ಲೀಟರ್‌ನಷ್ಟು ಟ್ಯಾಂಕ್‍ನ್ನು ಹೊಂದಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 270 ಲೀಟರ್ ಸಾಮರ್ಥ್ಯವನ್ನು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಇದು ಎರಡು ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 5 ಸೆಕೆಂಡುಗಳನ್ನು 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ವೈಶಿಷ್ಟ್ಯಗಳು (Features):
ಹೊಸ 'ಎಸ್-ಪ್ರೆಸ್ಸೊ' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್ ಸಿಸ್ಟಮ್, ಪವರ್ ವಿಂಡೋಗಳು, ಯುಎಸ್‌ಬಿ ಕನೆಕ್ಟಿವಿಟಿ ಹಾಗೂ ಕೀಲೆಸ್ ಎಂಟ್ರಿಯನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 2 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್, ಆಟೋ ಡೋರ್ ಲಾಕ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.


Click it and Unblock the Notifications








