Maruti S-Presso: 32.73 ಕಿ.ಮೀ ಮೈಲೇಜ್.. 5-ಸೀಟರ್, ಮಾರುತಿ ಎಸ್-ಪ್ರೆಸ್ಸೊ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?
ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ ಇಂಡಿಯಾ (Maruti Suzuki India) ಗುರುತಿಸಿಕೊಂಡಿದೆ. ತಯಾರಿಕಾ ವೆಚ್ಚಗಳು ಹೆಚ್ಚಳಗೊಂಡ ಹಿನ್ನೆಲೆ, ಫೆಬ್ರವರಿ 1ಕ್ಕೆ ಅನ್ವಯವಾಗುವಂತೆ ಎಲ್ಲ ಕಾರುಗಳ ಬೆಲೆಯನ್ನು ರೂ.1,500 ದಿಂದ ರೂ.32,500 ವರೆಗೆ ಏರಿಕೆ ಮಾಡಿದೆ. ಕಂಪನಿ ಘೋಷಣೆ ಮಾಡಿರುವ ಈ ದರ ಏರಿಕೆ ಎಫೆಕ್ಟ್ 'ಎಸ್-ಪ್ರೆಸ್ಸೊ' ಹ್ಯಾಚ್‌ಬ್ಯಾಕ್‌ಗೂ ತಟ್ಟಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ನೂತನ ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಹ್ಯಾಚ್‌ಬ್ಯಾಕ್ ಬೆಲೆ ರೂ.5,000 ಏರಿಕೆಯಾಗಿದೆ. ಈ ದರ ಪರಿಷ್ಕರಣೆಯು ವಿಎಕ್ಸ್ಐ (ಒ) ಎಎಂಟಿ ಮತ್ತು ವಿಎಕ್ಸ್ಒ (ಒ) ಪ್ಲಸ್ ಎಎಂಟಿ ರೂಪಾಂತರಗಳಿಗೆ (ವೇರಿಯೆಂಟ್) ಮಾತ್ರ ಅನ್ವಯಿಸುತ್ತದೆ. ಉಳಿದ ಎಲ್ಲ ರೂಪಾಂತರಗಳ ಬೆಲೆಗಳು ಬದಲಾಗದೆ ಹಾಗೆಯೇ ಉಳಿದಿದೆ. ಈ ಕಾರು ರೂ.4.26 ಲಕ್ಷದಿಂದ ರೂ.6.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ನೂತನ ಎಸ್-ಪ್ರೆಸ್ಸೊ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸಾಲಿಡ್ ಸಿಜಲ್ ಆರೆಂಜ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಪರ್ಲ್ ಸ್ಟಾರ್ರಿ ಬ್ಲೂ, ಬ್ಲೂಯಿಶ್ ಬ್ಲ್ಯಾಕ್ ಹಾಗೂ ಸಾಲಿಡ್ ವೈಟ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ಹೊಸ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 270 ಲೀಟರ್ ಸಾಮರ್ಥ್ಯದ ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಮಾಡೆಲ್ ಕೂಡ ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ, 57 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ.
ನೂತನ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.12 ರಿಂದ 32.73 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications