32.73 Km ಮೈಲೇಜ್.. ಅಗ್ಗದ ಮಾರುತಿ ಎಸ್-ಪ್ರೆಸ್ಸೊ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಫೆ.1ಕ್ಕೆ ಅನ್ವಯವಾಗುವಂತೆ ಈ ಕಾರಿನ ಬೆಲೆ ರೂ.5,000 ಏರಿಕೆಯಾಗಿದೆ. ಇದರೊಂದಿಗೆ ಕನಿಷ್ಠ ರೂ.4.26 ಲಕ್ಷ ಮತ್ತು ಗರಿಷ್ಠ ರೂ.6.11 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ನೀವು ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಎಸ್-ಪ್ರೆಸ್ಸೊ ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಸ್ಟ್ಯಾಂಡರ್ಡ್ (ಒ) ಪೆಟ್ರೋಲ್ ರೂಪಾಂತರ, ರೂ.5.41 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ, ತೆಗೆದುಕೊಂಡರೆ, ರೂ.3.41 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.7,000 ವರೆಗೆ ಇಎಂಐ ಕಟ್ಟಬೇಕು.

ಈ ಮಾರುತಿ ಎಸ್-ಪ್ರೆಸ್ಸೊ ಕಾರಿನ ಎಲ್ಎಕ್ಸ್ಐ (ಒ) ರೂಪಾಂತರ, ರೂ.6.31 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.4.31 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.9,000 ವರೆಗೆ ಇಎಂಐ ಪಾವತಿಸಬೇಕು.
ನೂತನ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್‌ನ ವಿಎಕ್ಸ್ಐ (ಒ) ಪೆಟ್ರೋಲ್ ರೂಪಾಂತರ, ರೂ.6.65 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿ ಮಾಡಿ ತೆಗೆದುಕೊಂಡರೆ, ರೂ.4.65 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.9.500 ಇಎಂಐ ಕಟ್ಟಬೇಕು.

ಹೊಸ ಎಸ್-ಪ್ರೆಸ್ಸೊ ಕಾರಿನ ವಿಎಕ್ಸ್ಐ ಪ್ಲಸ್ (ಒ) ಪೆಟ್ರೋಲ್ ರೂಪಾಂತರ, ರೂ.7 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.5 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ 10,000 ವರೆಗೆ ಇಎಂಐ ಪಾವತಿ ಮಾಡಬೇಕು.
ಈ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್‌ನ ಎಲ್ಎಕ್ಸ್ಐ (ಒ) ಸಿಎನ್‌ಜಿ ರೂಪಾಂತರ, ರೂ.7.55 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.5.55 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ 11,000 ವರೆಗೆ ಇಎಂಐ ಕಟ್ಟಬೇಕು.

ನೂತನ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್ 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.12 ರಿಂದ 32.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.
ಈ ಕಾರು 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ತನ್ನದಾಗಿಸಿಕೊಂಡಿದೆ.
ನಾವಿಲ್ಲಿ.. ಈ ಕಾರಿನ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ತಿಳಿಸಿಕೊಟ್ಟಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications