ಬಡವರಿಗೆ ಪರ್ಫೆಕ್ಟ್ ಕಾರಿದು.. 33 ಕಿ.ಮೀ ಮೈಲೇಜ್, ಬರೀ 3.50 ಲಕ್ಷ.. ಈ ಮಾರುತಿ ಕಾರಿಗೆ ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅತಿ ಕಡಿಮೆ ಬೆಲೆಯಲ್ಲಿಯೂ ಲಭ್ಯವಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುವಂತಿದೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಎಸ್-ಪ್ರೆಸ್ಸೊ' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಸೆಪ್ಟೆಂಬರ್ - 2025) ಸರಿ ಸುಮಾರು 1,774 ಯುನಿಟ್‌ 'ಮಾರುತಿ ಎಸ್-ಪ್ರೆಸ್ಸೊ' ಕಾರುಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 1,708 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷದಿಂದ (YoY) ಶೇಕಡ 4% ಪ್ರಗತಿಯಾಗಿದೆ.

Maruti Suzuki S-Presso September 2025 Sales Report

ಆದರೂ 'ಎಸ್-ಪ್ರೆಸ್ಸೊ' ಇದೇ ವರ್ಷದ ಜೂನ್‌ನಿಂದ ಆಗಸ್ಟ್‌ವರೆಗೆ ಅಷ್ಟಾಗಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿಲ್ಲ. ಒಟ್ಟು 3,614 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿದೆ. ಈ ಅಂಕಿಅಂಶವನ್ನು ವಿಶ್ಲೇಷಿಸಿದಾಗ ಪ್ರತಿ ತಿಂಗಳು ಸರಾಸರಿ 1,204 ಯುನಿಟ್‌ಗಳು ಮಾರಾಟವಾಗಿವೆ.

ಸದ್ಯ, 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ಮಾರಾಟವು ಚೇತರಿಕೆ ಹಾದಿಯಲ್ಲಿದೆ. ಅದಕ್ಕೆ ಸೆ.22 ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿರುವುದು ಪ್ರಮುಖವಾದ ಕಾರಣವಾಗಿದೆ. ಈ ಕಾರಿನ ಬೆಲೆಯೂ ರೂ.1.29 ಲಕ್ಷವರೆಗೆ ಇಳಿಕೆಯಾಗಿದೆ. ಹೀಗಾಗಿ, ಮಾರಾಟವು ಚೆನ್ನಾಗಿದೆ. ಈ ಅಕ್ಟೋಬರ್ ತಿಂಗಳಲ್ಲಿಯೂ 'ಎಸ್-ಪ್ರೆಸ್ಸೊ' ಭಾರೀ ಸಂಖ್ಯೆಯಲ್ಲಿ ಮಾರಾಟವಾಗಬಹುದು ಎಂದು ಅಂದಾಜಿಸಲಾಗಿದೆ.

Maruti Suzuki S-Presso September 2025 Sales Report

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ವಿಶೇಷತೆಗಳೇನು:

ಈ ಹ್ಯಾಚ್‌ಬ್ಯಾಕ್ ಕನಿಷ್ಠ ರೂ.3.50 ಲಕ್ಷ ಹಾಗೂ ಗರಿಷ್ಠ ರೂ.5.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಸೇರಿದಂತೆ ವಿವಿಧ ಅತ್ಯಾಧುನಿಕವಾದ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 14 ಇಂಚಿನ ವೀಲ್‌ಗಳನ್ನು ಪಡೆದಿದೆ.

ಇದು ಸಾಲಿಡ್ ಫೈರ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮೆಟಾಲಿಕ್ ಗ್ರಾನೈಟ್ ಗ್ರೇ ಮತ್ತು ಮೆಟಾಲಿಕ್ ಸಿಲ್ಕಿ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 854 ಕೆಜಿ ತೂಕವಿದೆ.

ನೂತನ 'ಎಸ್-ಪ್ರೆಸ್ಸೊ' 1-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್‌) ಆಯ್ಕೆಯನ್ನು ಪಡೆದಿದೆ. 24 ರಿಂದ 33 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 27 ಲೀಟರ್‌ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 5 ಸೆಕೆಂಡುಗಳನ್ನು 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್, ಪವರ್ ವಿಂಡೋಗಳು, ಯುಎಸ್‌ಬಿ ಕನೆಕ್ಟಿವಿಟಿ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 2 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್, ಆಟೋ ಡೋರ್ ಲಾಕ್ & ರೇರ್ ಪಾರ್ಕಿಂಗ್ ಸೆನ್ಸರ್‌ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Thursday, October 16, 2025, 8:30 [IST]
English summary
Maruti suzuki s presso september 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+