Maruti Suzuki: 25.51 ಕಿ.ಮೀ ಮೈಲೇಜ್... 8.6 ಲಕ್ಷ ಬೆಲೆ... ಸನ್‌ರೂಫ್ ಕಾರಿಗೆ ಮುಗಿಬಿದ್ದ ಜನ!
ಹೊಸ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಕಾರು ಸಬ್ - 4 ಮೀಟರ್ ಎಸ್‌ಯುವಿ ವಿಭಾಗದಲ್ಲಿ ಮುನ್ನುಗ್ಗುತ್ತಿದೆ. ರಗಡ್ ಎಸ್‌ಯುವಿ ಲುಕ್, ಆಕರ್ಷಕ ಫೀಚರ್ಸ್, ಅತ್ಯುತ್ತಮ ಮೈಲೇಜ್‌ನೊಂದಿಗೆ ಪ್ರತಿಸ್ಪರ್ಧಿಗಳಿಗೆ ಸರಿಯಾದ ಪೈಪೋಟಿ ನೀಡುತ್ತಿದೆ. ಕಳೆದ ಮೇ ತಿಂಗಳ ಮಾರಾಟದಲ್ಲಿ ಕಂಪನಿಗೆ ಅತ್ಯುತ್ತಮ ಲಾಭ ತಂದುಕೊಟ್ಟಿದೆ. ರೂ. 8.69 ಲಕ್ಷದಿಂದ ರೂ. 14.14 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿರುವ ಈ ಸಬ್ - 4 ಮೀಟರ್ ಎಸ್‌ಯುವಿ, ಬರೋಬ್ಬರಿ 15,566 ಯುನಿಟ್ ವಾಹನಗಳು ಮೇ ತಿಂಗಳಲ್ಲಿ ಮಾರಾಟವಾಗಿವೆ.
ಹೊಸ ಮಾರುತಿ ಸುಜುಕಿ ಬ್ರೆಝಾ ಕಾರು ಭಾರತದಲ್ಲಿ ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್‌ಒ, ಕಿಯಾ ಸೈರಸ್ ಮತ್ತು ಹ್ಯುಂಡೈ ವೆನ್ಯೂ ಕಾರುಗಳಿಗೆ ಪೈಪೋಟಿ ನೀಡುತ್ತದೆ. ತನ್ನ ವಿಭಾಗದಲ್ಲಿ ಇಷ್ಟೆಲ್ಲಾ ಪ್ರತಿಸ್ಪರ್ಧಿಗಳನ್ನು ಹೊಂದಿರುವ ಹೊಸ ಬ್ರೆಝಾ ಸದ್ಯ ಕೈಗೆಟುಕುವ ಬೆಲೆಯ ಬೆಸ್ಟ್ ಎಸ್‌ಯುವಿಯಾಗಿದೆ. ಹಾಗಾಗಿಯೇ ಮಾರಾಟದಲ್ಲಿ ಧೂಳೆಬ್ಬಿಸುತ್ತಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, 5 ಮಂದಿ ಪ್ರಯಾಣಿಕರು ಆರಾಮವಾಗಿ ಪ್ರಯಾಣಿಸಬಹುದು. ಉತ್ತಮ 328 ಲೀಟರ್‌ನಷ್ಟು ಬೂಟ್ ಸ್ಪೇಸ್ ನೀಡಲಾಗಿದ್ದು, ಸಾಕಷ್ಟು ಲಗ್ಗೇಜ್ ಸಾಗಿಸಬಹುದಾಗಿದೆ. ಈ ಕಾರು ಸುರಕ್ಷಿತೆ ವಿಚಾರದಲ್ಲೂ ಗ್ಲೋಬಲ್ NCAP ಕ್ರ್ಯಾಶ್ ಪರೀಕ್ಷೆಗಳಲ್ಲಿ ಪ್ರಭಾವಶಾಲಿ 4-ಸ್ಟಾರ್ ಸುರಕ್ಷತಾ ರೇಟಿಂಗ್ ಗಳಿಸಿದೆ.
ಹಾಗೆಯೇ ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಸೀಟ್ ಬೆಲ್ಟ್ ರಿಮೈಂಡರ್ಸ್, ರೇರ್ ಪಾರ್ಕಿಂಗ್ ಸೇನಾರ್ಸ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಹೋಲ್ಡ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಮ್ಯಾಗ್ಮಾ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಖರೀದಿಸಬಹುದು.

ಮಾರುತಿ ಬ್ರೆಝಾವನ್ನು K-15 ಪೆಟ್ರೋಲ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5 - ಸ್ಪೀಡ್ ಮ್ಯಾನುವಲ್ ಅಥವಾ 6 - ಸ್ಪೀಡ್ ಆಟೋಮ್ಯಾಟಿಕ್ ನೊಂದಿಗೆ ನೀಡಲಾಗುತ್ತದೆ. ಆಟೋಮ್ಯಾಟಿಕ್ ವೇರಿಯೆಂಟ್‌ಗಳು ಮೈಲ್ಡ್ - ಹೈಬ್ರಿಡ್ ತಂತ್ರಜ್ಞಾನವನ್ನು ಸ್ಟ್ಯಾಂಡರ್ಡ್ ಆಗಿ ಪಡೆಯುತ್ತವೆ. ಪೆಟ್ರೋಲ್‌ನಲ್ಲಿ 17.38 ಕಿ.ಮೀ ಹಾಗೂ ಸಿಎನ್‌ಜಿನಲ್ಲಿ 25.51 ಕಿ.ಮೀವರೆಗು ಮೈಲೇಜ್ ನೀಡುತ್ತದೆ.
ಈ ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 6-ಸ್ಪೀಕರ್ ಸೆಟಪ್ ಹಾಗೂ ಸನ್‌ರೂಫ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಹೊಸ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿ ಕಳೆದ ಫೆಬ್ರವರಿ 2025 ರ ಆರಂಭದಲ್ಲಿ 20,000 ರೂ.ಗಳವರೆಗೆ ಬೆಲೆ ಏರಿಕೆಯನ್ನು ಪಡೆದಿದೆ.

ಈಗ ಎಲ್ಲಾ ವೇರಿಯೆಂಟ್‌ಗಳಲ್ಲಿಯೂ ಸರಿಹೊಂದಿಸಬಹುದಾದ ಹಿಂಭಾಗದ ಹೆಡ್ ರೆಸ್ಟ್‌ಗಳು ಮತ್ತು ಹಿಂಭಾಗದ ಸೀಟ್ ಬ್ಯಾಕ್ ರೆಸ್ಟ್ ಗಾಗಿ 60:40 ಸ್ಪ್ಲಿಟ್ ಫೋಲ್ಡಿಂಗ್ ಫಂಕ್ಷನ್, ಮುಂಭಾಗದ ಸೀಟ್ ಬೆಲ್ಟ್‌ಗಳಿಗೆ ಎತ್ತರ ಹೊಂದಾಣಿಕೆ, ಹಿಂಭಾಗದ ಸೆಂಟರ್ ಆರ್ಮ್ ರೆಸ್ಟ್ - ಕಪ್ ಹೋಲ್ಡರ್ ಸ್ಟ್ಯಾಂಡರ್ಡ್ ಆಗಿ ಲಭ್ಯವಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications