Maruti: 7 ಲಕ್ಷದ ಮಾರುತಿ ಕಾರಿಗೆ ಫುಲ್ ಡಿಮ್ಯಾಂಡ್: 16 ಸಾವಿರ ಕಾರುಗಳು ಉಡೀಸ್!

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಭಾರತದಲ್ಲಿ ಕಳೆದ ಹಲವು ವರ್ಷಗಳಿಂದ ಉತ್ತಮ ಮಾರಾಟ ಕಾಣುವ ಕಾರುಗಳ ಸಾಲಿನಲ್ಲಿ ಪ್ರಮುಖ ಕಾರಾಗಿ ಗುರ್ತಿಸಿಕೊಂಡಿದೆ. ಕಳೆದ ವರ್ಷ ಹೊಸ ಅಪ್‌ಡೇಟ್‌ಗಳನ್ನು ಪಡೆದುಕೊಂಡು ಬಿಡುಗಡೆಯಾದ ಬಳಿಕ ಈ ಕಾರಿಗೆ ಬೇಡಿಕೆ ಇನ್ನೂ ಹೆಚ್ಚಾಗಿದೆ. ಹೊಸ ಮುಂಭಾಗದ ಡಿಸೈನ್ ಹಾಗೂ ಮೈಲೇಜ್ ಹೆಚ್ಚಳದೊಂದಿಗೆ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಕಾರು ಕಳೆದ ತಿಂಗಳು ಫೆಬ್ರವರಿಯಲ್ಲಿ ಭರ್ಜರಿ ಮಾರಾಟವನ್ನು ದಾಖಲಿಸಿದೆ. ಒಂದು ತಿಂಗಳಲ್ಲಿ ಬರೋಬ್ಬರಿ 15 ಸಾವಿರಕ್ಕೂ ಹೆಚ್ಚು ಕಾರುಗಳು ಮಾರಾಟವಾಗಿರುವುದಾಗಿ ಕಂಪನಿ ಬಹಿರಂಗಪಡಿಸಿದೆ.

ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಫೆಬ್ರವರಿ 2025 ರಲ್ಲಿ ಗಮನಾರ್ಹ ಜಿಗಿತವನ್ನು ಕಂಡಿದ್ದು, ಬರೋಬ್ಬರಿ 16,269 ಯುನಿಟ್‌ ಕಾರುಗಳು ಮಾರಾಟವಾಗಿವೆ. ಹಿಂದಿನ ವರ್ಷ ಮಾರಾಟವಾದ 13,165 ಯುನಿಟ್‌ ಕಾರುಗಳಿಗೆ ಹೋಲಿಸಿದರೆ ಇದು ವರ್ಷದಿಂದ ವರ್ಷಕ್ಕೆ ಶೇಕಡಾ 24 ರಷ್ಟು ಬಲವಾದ ಬೆಳವಣಿಗೆಯಾಗಿದ್ದು, ಇದು ಅದರ ನಿರಂತರ ಆಕರ್ಷಣೆಯನ್ನು ಪ್ರತಿಬಿಂಬಿಸುತ್ತದೆ.

maruti-suzuki-swift-2025-february-sales-report

ಮಾರುತಿ ಸುಜುಕಿ ಸ್ವಿಫ್ಟ್ ವಿಶೇಷತೆಗಳು: ಹೊಸ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಕಾರು LXI, VXI, VXI()), ZXI, ZXI+ ವೇರಿಯೆಂಟ್‌ಗಳಲ್ಲಿ ಲಭ್ಯವಿದ್ದು, ರೂ. 6.49 ಲಕ್ಷದಿಂದ ರೂ. 9.65 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ನಾವೆಲ್ ಆರೆಂಜ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.

ಹೊಸ ಹ್ಯಾಚ್‌ಬ್ಯಾಕ್‌ 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಟೈಪ್ - ಎ & ಟೈಪ್ - ಸಿ ಪೋರ್ಟ್‌ ಸೇರಿದಂತೆ ವಿವಿಧ ಫೀಚರ್‌ಗಳನ್ನು ಹೊಂದಿದೆ.

maruti-suzuki-swift-2025-february-sales-report

ಎಂಜಿನ್ ವಿಷಯಕ್ಕೆ ಬಂದರೆ ಇದರಲ್ಲಿ 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ನೀಡಲಾಗಿದೆ. 80 ಪಿಎಸ್ ಗರಿಷ್ಠ ಪವರ್ ಹಾಗೂ 112 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5 - ಸ್ಪೀಡ್ ಮ್ಯಾನುವಲ್/ 5 - ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಪ್ರತಿ ಲೀಟರ್‌ಗೆ 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

ಸುರಕ್ಷತೆ ವಿಷಯಕ್ಕೆ ಬಂದರೆ ಎಲ್ಲಾ ವೇರಿಯೆಂಟ್‌ಗಳು 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಸೀಟ್ ಬೆಲ್ಟ್ ರಿಮೈಂಡರ್, TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಒಳಗೊಂಡಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

maruti-suzuki-swift-2025-february-sales-report

ಡಿಸೈನ್ ವಿಷಯಕ್ಕೆ ಬಂದರೆ ಮಾರುತಿ ಸುಜುಕಿ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ ಆಕರ್ಷಕವಾದ ವಿನ್ಯಾಸ (ಡಿಸೈನ್)ವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಬ್ಲ್ಯಾಕ್ (ಕಪ್ಪು) ಬಣ್ಣದಲ್ಲಿರುವ ಗ್ರಿಲ್, ಎಲ್ಇಡಿ ಫಾಗ್ ಲೈಟ್‌ಗಳು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ನವೀನವಾಗಿರುವ ಬಂಪರ್‌ಗಳು, 15-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಸ್, ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, March 19, 2025, 18:13 [IST]
English summary
Maruti suzuki swift 2025 february sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+