ಒಂದೇ ತಿಂಗಳಲ್ಲಿ 30,000 ಯುನಿಟ್ ಮಾರಾಟವಾದ ಕಾರನ್ನು ಎಂದಾದರೂ ಕಂಡಿದ್ದೀರಾ.. 33 Km ಮೈಲೇಜ್, 6.49 ಲಕ್ಷ!
ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿ ಯಾವುದೆಂದು ಕೇಳಿದರೆ ತಕ್ಷಣ ಬರುವ ಒಂದೇ ಒಂದೇ ಹೆಸರು ಮಾರುತಿ ಸುಜುಕಿ ಎಂದು. ಅಷ್ಟರಮಟ್ಟಿಗೆ ಕಂಪನಿಯ ಕಾರುಗಳು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿವೆ. ಅದರಲ್ಲೂ ಪ್ರತಿ ತಿಂಗಳ ಮಾರಾಟದಲ್ಲಿ ಮಾರುತಿ ಸುಜುಕಿಯೇ ನಂಬರ್ 1 ಆಗಿರುತ್ತದೆ. ಸದ್ಯ 2024ರ ಡಿಸೆಂಬರ್‌ವೊಂದರಲ್ಲೇ ಕಂಪನಿಯ ಪ್ರಖ್ಯಾತ 'ಸ್ವಿಫ್ಟ್' ಕಾರು ದಾಖಲೆಯ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ಬರೋಬ್ಬರಿ 30,000 ಯುನಿಟ್‌ಗಳನ್ನು ಗ್ರಾಹಕರು ಖರೀದಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ ಇಂಡಿಯಾ (Maruti Suzuki India), ಕಳೆದ ತಿಂಗಳು (ಡಿಸೆಂಬರ್-2024) 2,52,693 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದೆ. ಇದು ಕಂಪನಿಯ ತಿಂಗಳ ಮಾರಾಟದ ಇತಿಹಾಸದಲ್ಲಿ ಹೊಸ ದಾಖಲೆಯಾಗಿದ್ದು, ಮೊದಲ ಬಾರಿಗೆ 2,50,000 ಯುನಿಟ್‌ಗಳ ಗಡಿಯನ್ನು ದಾಟಿದಿದೆ. 2023ರ ಇದೇ ಅವಧಿಯಲ್ಲಿ 2,30,000 ಯುನಿಟ್‌ನ್ನು ಮಾರಾಟ ಮಾಡಿತ್ತು.

ಹೋದ ತಿಂಗಳು ಸರಿ ಸುಮಾರು 29,765 ಯುನಿಟ್ 'ಮಾರುತಿ ಸುಜುಕಿ ಸ್ವಿಫ್ಟ್' ಕಾರುಗಳು ಯಶಸ್ವಿಯಾಗಿ ಮಾರಾಟಗೊಂಡಿವೆ. ಆ ನಂತರದ ಸ್ಥಾನದಲ್ಲಿ ವ್ಯಾಗನ್ಆರ್ (29,566 ಯುನಿಟ್) ಹಾಗೂ ಬಲೆನೊ (26,789 ಯುನಿಟ್) ಕಾರುಗಳಿವೆ. 2024ರ ಮೇನಲ್ಲಿ 4ನೇ ತಲೆಮಾರಿನ ಸ್ವಿಫ್ಟ್ (4th Generation Swift) ಕಾರನ್ನು ಬಿಡುಗಡೆ ಮಾಡಲಾಗಿತ್ತು. ಅದಾದ ಬಳಿಕ ಮಾರಾಟ ಸಂಖ್ಯೆ ಹೆಚ್ಚಳಗೊಂಡಿದೆ.
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್, ಕನಿಷ್ಠ ರೂ.6.49 ಲಕ್ಷ ಹಾಗೂ ಗರಿಷ್ಠ ರೂ.9.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿವಿಧ ರೂಪಾಂತರ (ವೇರಿಯೆಂಟ್) ಹಾಗೂ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

ಈ ಕಾರು 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 265 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ನೂತನ ಮಾರುತಿ ಸುಜುಕಿ ಸ್ವಿಫ್ಟ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಮುಖವಾಗಿ 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್, ಯುಎಸ್‌ಬಿ ಟೈಪ್-ಎ ಮತ್ತು ಟೈಪ್-ಸಿ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸ್ವಿಫ್ಟ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರ ರಕ್ಷಣೆ ಒದಗಿಸಲಿದೆ. ಈ ಹಿನ್ನೆಲೆ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಸೀಟ್ ಬೆಲ್ಟ್ ರಿಮೈಂಡರ್ ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications