32.85 ಕಿ.ಮೀ ಮೈಲೇಜ್.. 6 ಲಕ್ಷದ ಈ ಮಾರುತಿ ಕಾರನ್ನು ಮೆಚ್ಚಿದ್ರು ನಮ್ಮ ಗ್ರಾಹಕರು.. ಕಾರಣವೇನು?
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರು ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಏಪ್ರಿಲ್‌ನಲ್ಲಿ ದೇಶೀಯವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಇದರಲ್ಲಿ 'ಸ್ವಿಫ್ಟ್' ಹ್ಯಾಚ್‌ಬ್ಯಾಕ್ ಸಹ ಇದ್ದು, ಏಳನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿಯು ಬರೋಬ್ಬರಿ 14,592 ಯುನಿಟ್ ಸ್ವಿಫ್ಟ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ. ಅದೇ ರೀತಿಯಲ್ಲಿ ಈ ವರ್ಷದ ಮೊದಲ 3 ತಿಂಗಳಲ್ಲೂ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗಳು ಉತ್ತಮ ಸಂಖ್ಯೆಯಲ್ಲಿಯೇ ಮಾರಾಟಗೊಂಡಿವೆ. ಮಾರ್ಚ್‌ನಲ್ಲಿ 17,746 ಯುನಿಟ್, ಫೆಬ್ರವರಿಯಲ್ಲಿ 16,269 ಯುನಿಟ್ ಮತ್ತು ಜನವರಿಯಲ್ಲಿ 17,081 ಯುನಿಟ್‌ಗಳನ್ನು ಮಾರಲಾಗಿದೆ.

ಈ ಮಾರಾಟ ಅಂಕಿ - ಸಂಖ್ಯೆಯನ್ನು ಗಮನಿಸಿದಾಗ ಪ್ರತಿ ತಿಂಗಳು ಸರಿ ಸುಮಾರು 15,000 ಯುನಿಟ್ 'ಮಾರುತಿ ಸುಜುಕಿ ಸ್ವಿಫ್ಟ್' ಹ್ಯಾಚ್‌ಬ್ಯಾಕ್‌ಗಳು ಮಾರಾಟಗೊಂಡಿವೆ. ಈ ಕಾರು ಹೊರ ಹಾಗೂ ಒಳಭಾಗ ನೋಡಲು ಚೆನ್ನಾಗಿದ್ದು, ನಿರ್ವಹಣಾ ವೆಚ್ಚವು ಬಹಳ ಕಡಿಮೆ ಇದೆ. ಹಾಗೆಯೇ ಗರಿಷ್ಠ ಮೈಲೇಜ್ ನೀಡುವುದರಿಂದ ಖರೀದಿದಾರರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಮಾರುತಿ ಸುಜುಕಿ ಸ್ವಿಫ್ಟ್ ವಿಶೇಷತೆಗಳೇನು..
ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅತಿ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಮಧ್ಯಮ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಈ ಕಾರು ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ ಕನಿಷ್ಠ 6.49 ಲಕ್ಷ ಮತ್ತು ಗರಿಷ್ಠ ರೂ.9.64 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ಈ ಕಾರು ಹೆಚ್ಚು ಬಲಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಇದರೊಂದಿಗೆ ಸಾಮಾನ್ಯ ಬೈಕ್‌ನ್ನು ಮೀರಿಸುವ ರೀತಿಯಲ್ಲಿ 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 265 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಈ ಕಾರು ಸಿಜ್ಲಿಂಗ್ ರೆಡ್, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ & ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್ ಮತ್ತು ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications