Maruti Suzuki: 32+ Km ಮೈಲೇಜ್.. 6.49 ಲಕ್ಷ, 5-ಸೀಟರ್.. ಈ ಮಾರುತಿ ಕಾರಿಗೆ ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ಪ್ರಮುಖ ವಾಹನ ತಯಾರಕ ಕಂಪನಿಗಳು ಫೆಬ್ರವರಿ ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನೂತನ ಸ್ವಿಫ್ಟ್ ಕಾರು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಫೆಬ್ರವರಿ - 2025) ಮಾರುತಿ ಸುಜುಕಿ, ಸರಿ ಸುಮಾರು ಯುನಿಟ್ 16,269 ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 13,165 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 24% ಬೆಳವಣಿಗೆಯಾಗಿದೆ. ಜನವರಿಯಲ್ಲಿ 17,081 ಯುನಿಟ್ ಸ್ವಿಫ್ಟ್ ಕಾರುಗಳನ್ನು ಮಾರಾಟಗೊಳಿಸಲಾಗಿತ್ತು.

Maruti Suzuki Swift Car February 2025 Sales Report 24 Percent Growth Details

2024ರಲ್ಲಿಯೂ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದವು. ಡಿಸೆಂಬರ್‌ನಲ್ಲಿ 10,421 ಯುನಿಟ್, ನವೆಂಬರ್‌ನಲ್ಲಿ 14,737 ಯುನಿಟ್, ಅಕ್ಟೋಬರ್‌ನಲ್ಲಿ 17,539 ಹಾಗೂ ಸೆಪ್ಟೆಂಬರ್‌ನಲ್ಲಿ 16,241 ಯುನಿಟ್‌ಗಳು ಮಾರಾಟವಾಗಿದ್ದವು. ಇದು ಮಾತ್ರವಲ್ಲದೆ, ಸ್ವಿಫ್ಟ್ ಕಾರಿನ ಬೆಲೆ ರೂ.5,000 ಏರಿಕೆಯಾಗಿದೆ.

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್, ರೂ.6.49 ಲಕ್ಷದಿಂದ ರೂ.9.64 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ & ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Swift Car February 2025 Sales Report 24 Percent Growth Details

ಈ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್, ಲಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಎಂಬ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ನಡೆಸಬಹುದು. ಜೊತೆಗೆ 265 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಇದರೊಟ್ಟಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೂ ಲಭ್ಯವಾಗುತ್ತದೆ. ಈ ಕಾರಿನ ಪೆಟ್ರೋಲ್ ರೂಪಾಂತರಗಳು 24.8 ರಿಂದ 25.75 ಕೆಎಂಪಿಎಲ್‌ ಹಾಗೂ ಸಿಎನ್‌ಜಿ ರೂಪಾಂತರಗಳು 32.85 ಕೆಎಂ/ಕೆಜಿ ವರೆಗೆ ಮೈಲೇಜ್ ನೀಡುತ್ತವೆ.

ಈ ಕಾರು 9 - ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, March 6, 2025, 21:00 [IST]
English summary
Maruti suzuki swift car february 2025 sales report 24 percent growth details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+