32.85 Km ಮೈಲೇಜ್.. 5 ಲಕ್ಷದ ಈ ಮಾರುತಿ ಕಾರಿಗಾಗಿ ಜನರು ಶೋರೂಂ ಮುಂದೆ ಸಾಲು ಕಟ್ಟುವರು, ಹೊಸ ದರವೆಷ್ಟು?

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಜಗಮೆಚ್ಚಿದ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. ಪ್ರತಿ ತಿಂಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸೆ.22 ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಅಧಿಕೃತವಾಗಿ ಜಾರಿಗೊಂಡಿವೆ. ಇದರ ಸಂಪೂರ್ಣ ಪ್ರಯೋಜನಗಳು 'ಸ್ವಿಫ್ಟ್' ಕಾರಿಗೂ ಲಭ್ಯವಿದೆ. ಸರಿ ಸುಮಾರು ರೂ.84,600 ವರೆಗೆ ಬೆಲೆ ಇಳಿಕೆಯಾಗಿದೆ. ನಾವಿಲ್ಲಿ ಈ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ರೂಪಾಂತರಗಳ (ವೇರಿಯೆಂಟ್) ಹೊಸ 'ಎಕ್ಸ್-ಶೋರೂಂ' ದರ ಎಷ್ಟಾಗಿದೆ ಎಂಬುದರ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ನೂತನ 'ಮಾರುತಿ ಸ್ವಿಫ್ಟ್' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ ಎಲ್ಎಕ್ಸ್ಐ ಪೆಟ್ರೋಲ್ ರೂಪಾಂತರ ರೂ.5,78,900, ವಿಎಕ್ಸ್ಐ ಪೆಟ್ರೋಲ್ ರೂಪಾಂತರ ರೂ.6,58,900, ವಿಎಕ್ಸ್ಒ (ಒ) ಪೆಟ್ರೋಲ್ ರೂಪಾಂತರ ರೂ.6,84,900 ಹಾಗೂ ವಿಎಕ್ಸ್ಐ ಪೆಟ್ರೋಲ್ ಆಟೋಮೆಟಿಕ್ ಟ್ರಾಸ್ಮಿಷನ್ ರೂಪಾಂತರ ರೂ.7,03,900 ಮತ್ತು ವಿಎಕ್ಸ್ಒ (ಒ) ಪೆಟ್ರೋಲ್ ಆಟೋಮೆಟಿಕ್ ಟ್ರಾಸ್ಮಿಷನ್ ರೂಪಾಂತರ ರೂ.7,29,900 ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ.

Maruti Suzuki Swift Car New Price Details

ಅದೇ ರೀತಿಯಲ್ಲಿ ಈ ಕಾರಿನ ಮತ್ತಷ್ಟು ರೂಪಾಂತರಗಳು (ವೇರಿಯೆಂಟ್) ಸಹ ಸಿಗುತ್ತವೆ. ವಿಎಕ್ಸ್ಐ ಸಿಎನ್‌ಜಿ ರೂಪಾಂತರ ರೂ.7,44,900, ಝಡ್ಎಕ್ಸ್ಐ ಪೆಟ್ರೋಲ್ ರೂಪಾಂತರ ರೂ.7,52,900, ವಿಎಕ್ಸ್ಒ ಸಿಎನ್‌ಜಿ ರೂಪಾಂತರ ರೂ.7,70,900, ಝಡ್ಎಕ್ಸ್ಐ ಪೆಟ್ರೋಲ್ ರೂಪಾಂತರ ರೂ.7,97,900, ಝಡ್ಎಕ್ಸ್ಐ ಪ್ಲಸ್ ಪೆಟ್ರೋಲ್ ರೂಪಾಂತರ ರೂ.8,19,900, ಝಡ್ಎಕ್ಸ್ಐ ಸಿಎನ್‌ಜಿ 8,38,900 ಹಾಗೂ ಝಡ್ಎಕ್ಸ್ಐ ಪ್ಲಸ್ ಪೆಟ್ರೋಲ್ ಆಟೋಮೆಟಿಕ್ ಟ್ರಾಸ್ಮಿಷನ್ ರೂಪಾಂತರ ರೂ.8,64,900 ಎಕ್ಸ್-ಶೋರೂಂ ದರವನ್ನು ಪಡೆದಿದೆ.

ಮಾರುತಿ ಸುಜುಕಿ ಸ್ವಿಫ್ಟ್ ವಿಶೇಷತೆಗಳೇನು:

ಇದು ತುಂಬಾ ಅಚ್ಚುಕಟ್ಟಾದ ಸರಳವಾದ ವಿನ್ಯಾಸವನ್ನು ಹೊಂದಿದೆ. ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 15 ಇಂಚಿನ ಕಟ್ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಸಿಜ್ಲಿಂಗ್ ರೆಡ್ ಮೆಟಾಲಿಕ್, ಲಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Swift Car New Price Details

ನೂತನ ಸ್ವಿಫ್ಟ್ ಸ್ವಲ್ಪ ಮಟ್ಟಿಗೆ ವಿಶಾಲ ಗಾತ್ರದಲ್ಲಿದೆ. 3,860 ಎಂಎಂ ಉದ್ದ, 1,735 ಎಂಎಂ ಅಗಲ ಹಾಗೂ 1,520 ಎಂಎಂ ಎತ್ತರವಿದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 925 ಕೆಜಿ ತೂಕವಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಜಾಸ್ತಿ ಲಗೇಜ್ ಸಾಗಿಸಲು 265 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 24 ರಿಂದ 32.85 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ದೂರದ ಊರುಗಳಿಗೆ ತೆರಳಲು ಸಾಧ್ಯವಾಗುವಂತೆ 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

Maruti Suzuki Swift Car New Price Details

ಇದು 165 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.2 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಹಾಗೂ ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಿಲ್ ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್‌ ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.

More from DriveSpark

Article Published On: Wednesday, October 1, 2025, 11:02 [IST]
English summary
Maruti suzuki swift car new price details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+