ಬೈಕ್‌ನಂತೆ 33 Km ಮೈಲೇಜ್.. 5 ಲಕ್ಷ, ಹೊಸ ಮಾರುತಿ ಸ್ವಿಫ್ಟ್ ಖರೀದಿಸಬೇಕೇ.. ಪ್ರಮುಖಾಂಶಗಳಿವು!
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift), ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ದಶಕಗಳಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಸ್ವಿಫ್ಟ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಇಲ್ಲಿ ಈ ಹ್ಯಾಚ್‌ಬ್ಯಾಕ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಈ ಕಾರು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.5.79 ಲಕ್ಷ ಹಾಗೂ ಗರಿಷ್ಠ ರೂ.8.80 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಸಾಮಾನ್ಯ ಹಾಗೂ ಶ್ರೀಮಂತ ವರ್ಗದವರು ಸಹ ಸುಲಭವಾಗಿ ಮನೆಗೆ ತರಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದ್ದು, ನೋಡುಗರನ್ನು ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸಿಜ್ಲಿಂಗ್ ರೆಡ್ ಮೆಟಾಲಿಕ್, ಲಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ನೂತನ 'ಸ್ವಿಫ್ಟ್' ಸ್ವಲ್ಪ ಮಟ್ಟಿಗೆ ವಿಶಾಲವಾದ ಕಾರಾಗಿದೆ. 3,860 ಮಿ.ಮೀ ಉದ್ದ, 1,735 ಮಿ.ಮೀ ಅಗಲ ಮತ್ತು 1,520 ಮಿ.ಮೀ ಎತ್ತರವಿದೆ. ಜೊತೆಗಿದು 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 925 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 265 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಹೊಸ 'ಸ್ವಿಫ್ಟ್' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24.80 ರಿಂದ 25.75 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಮತ್ತೊಂದು 1.2-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 70 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವುದೇ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 32.85 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಒಳಾಂಗಣ & ವೈಶಿಷ್ಟ್ಯಗಳು (Interior & Features):
ಇದರ ಕ್ಯಾಬಿನ್ ವಿನ್ಯಾಸವು ಹೆಚ್ಚು ಅತ್ಯಾಧುನಿಕವಾಗಿದ್ದು, ಉತ್ತಮವಾದ ಡ್ಯಾಶ್‌ಬೋರ್ಡ್‌ನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಮತ್ತು ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಿಲ್-ಹೋಲ್ಡ್ ಅಸಿಸ್ಟ್ ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿದೆ.


Click it and Unblock the Notifications








