ಬ್ರೋ.. 10 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಹೈ-ಮೈಲೇಜ್ ಕಾರನ್ನು ಹುಡುಕುತ್ತಿದ್ದೀರಾ, 5-ಸೀಟರ್‌ನ ಈ ಮಾಡೆಲ್‌ ಬೆಸ್ಟ್!

ಬ್ರೋ.. ರೂ.10 ಲಕ್ಷಕ್ಕಿಂತ ಕಡಿಮೆ ಎಕ್ಸ್-ಶೋರೂಂ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಹುಡುಕುತ್ತಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್ ಉತ್ತಮ ಆಯ್ಕೆಯಾಗಬಲ್ಲದು. ಇದು ಹೆಚ್ಚು ಆಕರ್ಷಕವಾಗಿದ್ದು, ಕಳೆದ 20 ವರ್ಷಗಳಿಂದ ದೇಶೀಯ ಮಾರುಕಟ್ಟೆಯಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಬರೋಬ್ಬರಿ 30 ಲಕ್ಷ ಗ್ರಾಹಕರು ಈ ಕಾರನ್ನು ಕೊಂಡುಕೊಂಡಿದ್ದಾರೆ. ಬನ್ನಿ.. ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ ಬೆಲೆ ಹಾಗೂ ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರು, ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗುತ್ತಿದೆ. ಈ ಹಿನ್ನೆಲೆ, ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯ ಖರೀದಿದಾರರ ಕುಟುಂಬದ ಆಯ್ಕೆಯ ವಾಹನವಾಗಿ ಹೊರಹೊಮ್ಮುತ್ತಿದೆ. ಇದು ಕನಿಷ್ಠ 6.49 ಲಕ್ಷ ಹಾಗೂ ಗರಿಷ್ಠ ರೂ.9.64 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

Maruti Suzuki Swift Good Choice For High Mileage Car Under Rs 10 Lakh Details

ಈ ಕಾರು ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, 15-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಹಾಗೂ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಇದರೊಟ್ಟಿಗೆ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ) ಹಾಗೂ ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದರ ಪೆಟ್ರೋಲ್ ಚಾಲಿತ ಮಾಡೆಲ್, 1.2-ಲೀ. 3-ಸಿಲಿಂಡರ್ 'ಜಡ್12ಇ' ಎಂಜಿನ್ ಹೊಂದಿದ್ದು, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

Maruti Suzuki Swift Good Choice For High Mileage Car Under Rs 10 Lakh Details

ಮತ್ತೊಂದು ಸಿಎನ್‌ಜಿ ಚಾಲಿತ ಮಾಡೆಲ್ ಸಹ ಇದೇ 1.2-ಲೀ. ಎಂಜಿನ್‌ನ್ನು ಒಳಗೊಂಡಿದೆ. ಆದರೆ 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ. ಜೊತೆಗೆ ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ದೊರೆಯುತ್ತದೆ.

ಈ ಕಾರು ಗರಿಷ್ಠ ಇಂಧನ ದಕ್ಷತೆಯನ್ನು ಒಳಗೊಂಡಿರುವುದರಿಂದ ನಿರ್ವಹಣಾ ವೆಚ್ಚವು ತೀರಾ ಅಗ್ಗವಾಗಿದೆ. ಇದರ ಪೆಟ್ರೋಲ್ ಮ್ಯಾನುವಲ್ (ಗೇರ್‌ಬಾಕ್ಸ್‌) ಮಾಡೆಲ್ 24.8 ಕೆಎಂಪಿಎಲ್ ಹಾಗೂ ಪೆಟ್ರೋಲ್ ಆಟೋಮೆಟಿಕ್ ಮಾಡೆಲ್ 25.75 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಹಾಗೆಯೇ ಸಿಎನ್‌ಜಿ ಮ್ಯಾನುವಲ್ ಮಾಡೆಲ್ 32.85 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತದೆ.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್ ಹಾಗೂ ಮ್ಯಾಗ್ಮಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ವೈರ್‌ಲೆಸ್ ಚಾರ್ಜರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ಸ್ವಿಫ್ಟ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, March 26, 2025, 14:45 [IST]
English summary
Maruti suzuki swift good choice for high mileage car under rs 10 lakh details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+