32 ಕಿ.ಮೀಗೂ ಅಧಿಕ ಮೈಲೇಜ್.. 6.49 ಲಕ್ಷ, 5-ಸೀಟರ್.. ಈ ಮಾರುತಿ ಕಾರಿಗೆ ಮುಗಿಬಿದ್ದ ಖರೀದಿದಾರರು!
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇತ್ತೀಚೆಗೆ ಪ್ರಮುಖ ವಾಹನ ತಯಾರಕ ಕಂಪನಿಗಳು ಮಾರ್ಚ್ ತಿಂಗಳ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನೂತನ 'ಸ್ವಿಫ್ಟ್' ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಕಾರುಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಹ್ಯುಂಡೈ ಕ್ರೆಟಾ (18,059 ಯುನಿಟ್) ಮೊದಲ ಸ್ಥಾನದಲ್ಲಿದೆ.
ಕಳೆದ ತಿಂಗಳು (ಮಾರ್ಚ್ - 2025) ಮಾರುತಿ ಸುಜುಕಿ ಇಂಡಿಯಾ ಬರೋಬ್ಬರಿ 17,746 ಯುನಿಟ್ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ ಮಾರಲಾಗಿದ್ದ 15,728 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 13% ಪ್ರಗತಿ ಸಾಧಿಸಲಾಗಿದೆ.

ಇದು ಮಾತ್ರವಲ್ಲದೆ, ಈ ವರ್ಷದ ಫೆಬ್ರವರಿಯಲ್ಲಿ 16,269 ಯುನಿಟ್ ಹಾಗೂ ಜನವರಿಯಲ್ಲಿ 17,081 ಯುನಿಟ್ ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡಲಾಗಿದೆ. 2024ರ ಕಡೆಯ 3 ತಿಂಗಳಲ್ಲಿ ಕೂಡ 'ಮಾರುತಿ ಸ್ವಿಫ್ಟ್' ಹ್ಯಾಚ್‌ಬ್ಯಾಕ್‌ಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿವೆ. ಡಿಸೆಂಬರ್‌ನಲ್ಲಿ 10,421 ಯುನಿಟ್, ನವೆಂಬರ್‌ನಲ್ಲಿ 14,737 ಯುನಿಟ್ ಹಾಗೂ ಅಕ್ಟೋಬರ್‌ನಲ್ಲಿ 17,539 ಯುನಿಟ್‌ಗಳನ್ನು ಮಾರಲಾಗಿತ್ತು.
ಸದ್ಯ ದೇಶೀಯವಾಗಿ ಖರೀದಿಗೆ ಲಭ್ಯವಿರುವ ನೂತನ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್, ಕನಿಷ್ಠ ರೂ.6.49 ಲಕ್ಷ ಹಾಗೂ ಗರಿಷ್ಠ ರೂ.9.64 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ & ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಸಿಜ್ಲಿಂಗ್ ರೆಡ್, ಲಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳನ್ನು ಪಡೆದಿದೆ.

ಈ ಕಾರು ಹೊರ ಹಾಗೂ ಒಳಭಾಗದಲ್ಲಿ ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 265 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಹೊಸ ಮಾರುತಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್, 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು ಯಾವ ಬೈಕ್‌ಗೂ ಕಡಿಮೆ ಇಲ್ಲದ ರೀತಿಯಲ್ಲಿ ಇಂಧನ ದಕ್ಷತೆಯನ್ನು ಪಡೆದಿದ್ದು, 24.8 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ವೈರ್‌ಲೆಸ್ ಚಾರ್ಜರ್‌ನ್ನು ಒಳಗೊಂಡಿದೆ. ಈ ಕಾರು ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications