32.85 Km ಮೈಲೇಜ್.. 6 ಲಕ್ಷ, ಜನಪ್ರಿಯ ಮಾರುತಿ ಸ್ವಿಫ್ಟ್ ಖರೀದಿಸಲು ಗ್ರಾಹಕರಿಗೆ ಮನಸಿಲ್ಲ.. ಕಾರಣವೇನು?

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ದಶಕಗಳಿಂದ ದೇಶೀಯ ಮಾರುಕಟ್ಟೆಯಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ಇವೆಲ್ಲ ಒಂದು ಕಡೆಯಾದರೆ, ನಾನಾ ಕಾರಣಗಳಿಂದ ದಿನದಿಂದ ದಿನಕ್ಕೆ 'ಸ್ವಿಫ್ಟ್' ಹ್ಯಾಚ್‌ಬ್ಯಾಕ್ ಮಾರಾಟ ಸಂಖ್ಯೆಯೂ ಕುಸಿತವಾಗುತ್ತಿದೆ. ಅದು 'ಮೇ'ನಲ್ಲೂ ಮುಂದುವರಿದಿದೆ. ಆದರೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಈ 'ಮೇ'ನಲ್ಲಿ (2025) ಮಾರುತಿ ಸುಜುಕಿ ಕಂಪನಿಯು ಒಟ್ಟು 14,135 ಯುನಿಟ್‌ 'ಸ್ವಿಫ್ಟ್' ಹ್ಯಾಚ್‌ಬ್ಯಾಕ್‌ಗಳನ್ನು ಮಾರಿದೆ. 2024ರ ಇದೇ ತಿಂಗಳಲ್ಲೂ 19,393 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶದೊಂದಿಗೆ ಲೆಕ್ಕಹಾಕಿದಾಗ ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 27% ಇಳಿಮುಖವಾಗಿದೆ.

Maruti Suzuki Swift May Sales 2025 Details

ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಮಾರಾಟ ಸಂಖ್ಯೆ ಕುಸಿತವಾಗಲು ಹತ್ತಾರು ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರಿನ ಆಸುಪಾಸು ಬೆಲೆಗೆ ಹಲವು ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ. ಗ್ರಾಹಕರು ಅವುಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜೊತೆಗೆ ಈ ಕಾರಿನ ವೈಶಿಷ್ಟ್ಯಗಳಲ್ಲಿಯೂ ಒಂದಷ್ಟು ಕೊರತೆಯಿರುವುದರಿಂದ ಬೇರೆ ಕಾರುಗಳನ್ನು ಖರೀದಿದಾರರು ಕೊಂಡುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ಸ್ವಿಫ್ಟ್ ವಿಶೇಷತೆಗಳೇನು..

ಇದೊಂದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿ ಲಭ್ಯವಿದ್ದು, ಮಧ್ಯಮ ವರ್ಗದ ಜನರು ಕೂಡ ಸುಲಭವಾಗಿ ಖರೀದಿ ಮಾಡಬಹುದು. ಇದು ರೂ.6.49 ಲಕ್ಷದಿಂದ ರೂ.9.64 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಈ ಕಾರು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ . ಸಿಜ್ಲಿಂಗ್ ರೆಡ್, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki Swift May Sales 2025 Details

ಈ ಕಾರು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. 3-ಸಿಲಿಂಡರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಜೊತೆಗೆ ಉತ್ತಮವಾದ ಇಂಧನ ದಕ್ಷತೆ (Fuel Efficiency) ಹೊಂದಿದ್ದು, 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 265 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

Maruti Suzuki Swift May Sales 2025 Details

ಮಾರುತಿ ಸುಜುಕಿ ಸ್ವಿಫ್ಟ್ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 3 ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, June 6, 2025, 10:46 [IST]
English summary
Maruti suzuki swift may sales 2025 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+