Maruti Suzuki: 33 ಕಿ.ಮೀ ಮೈಲೇಜ್.. 5.79 ಲಕ್ಷ, ಈ ಪ್ರಖ್ಯಾತ ಮಾರುತಿ ಕಾರಿನ ಮಾರಾಟ ದಿಢೀರ್ ಏರಿಕೆ!

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift), ಪ್ರಮುಖ ಹ್ಯಾಚ್‌ಬ್ಯಾಕ್‌ ಆಗಿದೆ. 2005ರಲ್ಲಿ ಬಿಡುಗಡೆಗೊಂಡ ಈ ಕಾರು, 2025ರಲ್ಲೂ ಉತ್ತಮವಾಗಿ ಮಾರಾಟವಾಗುತ್ತಿದೆ. ಆದರೂ ಇದೇ ವರ್ಷ 'ಸ್ವಿಫ್ಟ್' ಮಾರಾಟದಲ್ಲಿ ಹಲವು ಏಳುಬೀಳುಗಳನ್ನು ಕಾಣಲಾಗಿದೆ. ಇದಕ್ಕೆ ಅಪವಾದವೆಂಬಂತೆ ನವೆಂಬರ್ ತಿಂಗಳು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಖರೀದಿ ಮಾಡಿದ್ದಾರೆ. ಒಟ್ಟು 19,733 ಯುನಿಟ್‌ಗಳನ್ನು ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 14,737 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 34% ಪ್ರಗತಿಯಾಗಿದೆ.

ಇದೇ ನವೆಂಬರ್‌ನಲ್ಲಿ 'ಮಾರುತಿ ಸ್ವಿಫ್ಟ್' ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಜೊತೆಗಿದು ಹ್ಯಾಚ್‌ಬ್ಯಾಕ್‌ ಆಗಿದ್ದರೂ ಎಸ್‌ಯುವಿಗಳಿಗೆ ಸವಾಲೆಸೆಯುವ ರೀತಿಯಲ್ಲಿದೆ. ಹೀಗಾಗಿ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Maruti Suzuki Swift November 2025 Sales Details

ಈ ವರ್ಷದ ಜೂನ್‌ನಿಂದ ಅಕ್ಟೋಬರ್ ತಿಂಗಳವರೆಗೆ ಬರೋಬ್ಬರಿ 70,939 ಯುನಿಟ್‌ 'ಮಾರುತಿ ಸುಜುಕಿ ಸ್ವಿಫ್ಟ್' ಕಾರುಗಳನ್ನು ಮಾರಾಟ ಮಾಡಲಾಗಿದೆ. ಅಂದರೆ ಪ್ರತಿ ತಿಂಗಳು ಸರಾಸರಿ 14,187 ಯುನಿಟ್‌ಗಳು ಮಾರಾಟವಾಗಿವೆ. ಸದ್ಯ, ದೇಶೀಯ ಗ್ರಾಹಕರ ಖರೀದಿಗೆ ಲಭ್ಯವಿರುವ 'ಸ್ವಿಫ್ಟ್' ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಇದು ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 15 ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.

Maruti Suzuki Swift November 2025 Sales Details

ಹೊಚ್ಚ ಹೊಸ 'ಸ್ವಿಫ್ಟ್' ಸಾಕಷ್ಟು ವಿಶಾಲ ಗಾತ್ರದಲ್ಲಿರುವ ಕಾರಾಗಿದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್ ಮೆಟಾಲಿಕ್, ಲಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Swift November 2025 Sales Details

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 265 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಇನ್ಸ್ಟ್ರುಮೆಂಟ್ ಕ್ಲಸ್ಟರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ನೂತನ 'ಮಾರುತಿ ಸ್ವಿಫ್ಟ್' ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ವಿಶೇಷವಾಗಿ ಟಾಟಾ ಆಲ್ಟ್ರೋಜ್, ಹ್ಯುಂಡೈ ಐ20, ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಟೊಯೊಟಾ ಗ್ಲಾನ್ಜಾ, ಟಾಟಾ ಟಿಯಾಗೊ, ಸಿಟ್ರನ್ ಸಿ3 ಹಾಗೂ ಕಿಯಾ ಸೋನೆಟ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, December 11, 2025, 11:13 [IST]
English summary
Maruti suzuki swift november 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+