Swift: 6 ಲಕ್ಷ.. 32.85 Km ಮೈಲೇಜ್.. 5-ಸೀಟರ್, ಮಾರುತಿ ಸ್ವಿಫ್ಟ್ ಮನೆಗೆ ತರಬೇಕೇ.. ಆನ್-ರೋಡ್ ದರವೆಷ್ಟು, ಇಎಂಐ ಏನು?
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ರೂ.6.49 ಲಕ್ಷದಿಂದ ರೂ.9.64 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಪ್ಲಾನ್ ಮಾಡಿದ್ದೀರಾ.. ಹಾಗಾದರೆ, 'ಸ್ವಿಫ್ಟ್'ನ್ನು ತೆಗೆದುಕೊಳ್ಳಬಹುದು. ನಾವಿಲ್ಲಿ, ಇದೇ ಕಾರಿನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಹ್ಯಾಚ್‌ಬ್ಯಾಕ್ ವಿವಿಧ ರೂಪದಲ್ಲಿ ಲಭ್ಯವಿದೆ. ಇದರ ಪೆಟ್ರೋಲ್ ಚಾಲಿತ 'ಎಲ್ಎಕ್ಸ್ಐ' ರೂಪಾಂತರ, ರೂ.7.89 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.5.89 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.12,000 ವರೆಗೆ ಇಎಂಐ ಪಾವತಿಸಬೇಕು.

ಮತ್ತೊಂದು ಪೆಟ್ರೋಲ್ ಚಾಲಿತ 'ವಿಎಕ್ಸ್ಐ' ರೂಪಾಂತರ, ರೂ.8.85 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.6.85 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.14,000 ವರೆಗೆ ಇಎಂಐ ಕಟ್ಟಬೇಕು.
ಇನ್ನೊಂದು ಪೆಟ್ರೋಲ್ ಚಾಲಿತ ಝಡ್ಎಕ್ಸ್ಐ ರೂಪಾಂತರ, ರೂ.10 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.8 ಲಕ್ಷವರೆಗೆ ಸಾಲ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.16,000 ವರೆಗೆ ಇಎಂಐ ಪಾವತಿಸಬೇಕು.

ಹಾಗೆಯೇ ಸಿಎನ್‌ಜಿ ಚಾಲಿತ ವಿಎಕ್ಸ್ಐ ರೂಪಾಂತರ, ರೂ.9.95 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.7.95 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.16,000 ವರೆಗೆ ಇಎಂಐ ಕಟ್ಟಬೇಕು.
ಮಾರುತಿ ಸುಜುಕಿ ಸ್ವಿಫ್ಟ್ ವಿಶೇಷತೆಗಳೇನು:
ಈ ಹ್ಯಾಚ್‌ಬ್ಯಾಕ್ ವಿನ್ಯಾಸದ ದೃಷ್ಟಿಯಿಂದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು & 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಹಾಗೂ ನಾವೆಲ್ ಆರೆಂಜ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರಯುತ್ತದೆ. 3860 ಎಂಎಂ ಉದ್ದ, 1735 ಎಂಎಂ ಅಗಲ ಮತ್ತು 1520 ಎತ್ತರ ಕೂಡ ಇದೆ.

ನೂತನ ಸ್ವಿಫ್ಟ್ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 32.85 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ದೂರದ ಊರುಗಳಿಗೆ ಹೋಗಲು ಸಾಧ್ಯವಾಗುವಂತೆ 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. 5 ಆಸನಗಳು ಇದ್ದು, 265 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಇದು 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಹಾಗೂ ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications