Maruti Swift: 32.85 ಕಿ.ಮೀ ಮೈಲೇಜ್.. 5 ಸೀಟರ್, ಜನಪ್ರಿಯ ಮಾರುತಿ ಸ್ವಿಫ್ಟ್ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?
ಮಾರುತಿ ಸುಜುಕಿ ಇಂಡಿಯಾ (Maruti Suzuki India) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಅರೆನಾ ಹಾಗೂ ನೆಕ್ಸಾ ಶೋರೂಂಗಳಲ್ಲಿ ಮಾರಾಟಗೊಳಿಸುವ ವಿವಿಧ ಕಾರುಗಳ ಬೆಲೆಯನ್ನು ಫೆ.1ಕ್ಕೆ ಅನ್ವಯವಾಗುವಂತೆ ಹೆಚ್ಚಳ ಮಾಡಿದೆ. ಈ ದರವು ರೂ.1,500 ರಿಂದ ರೂ.32,500 ವರೆಗೆ ಏರಿಕೆಯಾಗಿದೆ. ತಯಾರಿಕಾ ವೆಚ್ಚಗಳು ಹೆಚ್ಚಾದ ಹಿನ್ನೆಲೆ, ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಕಂಪನಿಯು ಹೇಳಿದೆ. ಸದ್ಯ ಮಾರುತಿ ಸ್ವಿಫ್ಟ್ ದರವು ಕೂಡ ಅಧಿಕಗೊಂಡಿದೆ.
ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್ ಬೆಲೆಯು ರೂ.5,000 ಏರಿಕೆಯಾಗಿದೆ. ಈ ಮೂಲಕ ನೂತನ ಸ್ವಿಫ್ಟ್ ಕಾರು, ಕನಿಷ್ಠ ರೂ.6.49 ಲಕ್ಷ ಮತ್ತು ಗರಿಷ್ಠ ರೂ.9.64 ಲಕ್ಷ (ಎಕ್ಸ್-ಶೋರೂಂ - ಕರ್ನಾಟಕ) ದರವನ್ನು ಪಡೆದಿದೆ.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸಿಜ್ಲಿಂಗ್ ರೆಡ್, ಲಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಶಕ್ತಿಯುತವಾದ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು ಇದೇ ಎಂಜಿನ್ ಪಡೆದುಕೊಂಡಿರುವ ಸಿಎನ್‌ಜಿ ಮಾಡೆಲ್, 69 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.
ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಇನ್ಫೋಟೈನ್‌ಮೆಂಟ್ ಸ್ಕ್ರೀನ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್ , ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್ ಮತ್ತು ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ. ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗೆ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ರೆನಾಲ್ಟ್ ಟ್ರೈಬರ್ ಮತ್ತು ಟಾಟಾ ಪಂಚ್ ಕಾರುಗಳು ಪ್ರಬಲವಾದ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications