ಬೈಕ್‌ನಂತೆ 32.85 ಕಿ.ಮೀ ಮೈಲೇಜ್.. ರೂ.5.79 ಲಕ್ಷ.. ಈ ಮಾರುತಿ ಕಾರಿನ ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift), ದಶಕಗಳಿಂದ ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್‌ ಆಗಿದೆ. ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 15,547 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 16,241 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸ್ವಲ್ಪ ಮಟ್ಟಿಗೆ ಅಂದರೆ ಶೇಕಡ -4% ಇಳಿಕೆಯಾಗಿದೆ.

ಮಾರುತಿ ಸುಜುಕಿ ಸ್ವಿಫ್ಟ್ ವಿಶೇಷತೆಗಳೇನು:

ಈ ಹ್ಯಾಚ್‌ಬ್ಯಾಕ್‌ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.5.79 ಲಕ್ಷ ಹಾಗೂ ಗರಿಷ್ಠ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Swift September 2025 Sales Details

ಇದು ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 15 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪರ್ಲ್ ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್ ಮೆಟಾಲಿಕ್, ಸ್ಪ್ಲೆಂಡಿಡ್ ಸಿಲ್ವರ್, ಲಸ್ಟರ್ ಬ್ಲೂ, ನಾವೆಲ್ ಆರೆಂಜ್ & ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಸ್ವಿಫ್ಟ್' ಸಾಕಷ್ಟು ವಿಶಾಲವಾಗಿದೆ. 3,860 ಮಿ.ಮೀ ಉದ್ದ, 1,735 ಮಿ.ಮೀ ಅಗಲ ಹಾಗೂ 1,520 ಮಿ.ಮೀ ಎತ್ತರವಿದೆ. ಜೊತೆಗಿದು 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ 2450 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದ್ದು, ಸರಿ ಸುಮಾರು 990 ಕೆಜಿ ತೂಕವಿದೆ.

Maruti Suzuki Swift September 2025 Sales Details

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.80 ರಿಂದ 25.75 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್‌, 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 32.85 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

Maruti Suzuki Swift September 2025 Sales Details

ಇದು 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 265 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್, ಯುಎಸ್‌ಬಿ ಟೈಪ್-ಸಿ ಪೋರ್ಟ್‌, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಮತ್ತು ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ನೂತನ 'ಸ್ವಿಫ್ಟ್' ಪ್ರಯಾಣಿಕರ ಸುರಕ್ಷತೆಗೂ ಹೆಸರುವಾಗಿದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಸಿಎಸ್ (ಟ್ರಾಕ್ಷನ್ - ಕಂಟ್ರೋಲ್ ಸಿಸ್ಟಮ್), ಸೀಟ್ ಬೆಲ್ಟ್ ರಿಮೈಂಡರ್‌ ಹಾಗೂ 3 ಪಾಯಿಂಟ್ ಸೀಟ್‌ಬೆಲ್ಟ್‌ನಂತಹ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Monday, October 13, 2025, 18:07 [IST]
English summary
Maruti suzuki swift september 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+